ವಿರಾಜಪೇಟೆ ಫೆ.15 NEWS DESK : ವಿರಾಜಪೇಟೆಯ “ಚೋಟಾ ಚಾಂಪ್ಸ್” ಗುರುಕುಲಂ ಮಾದರಿ ಶಾಲೆಯ ಶಾಲಾ ವಾರ್ಷಿಕೋತ್ಸವ “ಸಂಭ್ರಮ-2023-24″ ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ರಾಜೇಶ್ವರಿ ಮಿನಿ ಕನ್ವೆನ್ಸನ್ ಹಾಲ್’ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಕರು ಮಕ್ಕಳಿಗೆ ಆಚಾರ ವಿಚಾರ, ಸಂಸ್ಕೃತಿ ಸಂಸ್ಕಾರವನ್ನು ಕಲಿಸುವಂತಾಗಬೇಕು. ಮಕ್ಕಳನ್ನು ರೀತಿಯ ದುಶ್ಚಟಗಳಿಂದ ದೂರವಿರುವಂತೆ ನೋಡಿಕೊಳ್ಳಬೇಕು. ಪುಟ್ಟ ಮಕ್ಕಳು ತಂದೆ ತಾಯಿ ಹಾಗೂ ತಮ್ಮ ಸುತ್ತಮುತ್ತ ಎನೇನು ನಡೆಯುತ್ತದೆಯೋ ಅದನ್ನೇ ಕಲಿತು ಅನುಸರಿಸುತ್ತಾರೆ. ಪುಟ್ಟ ಮಕ್ಕಳು ತನ್ನದೆಯಾದ ವಿಭಿನ್ನ ಕೌಶಲ್ಯಗಳನ್ನು ಹೊಂದಿರುತ್ತಾರೆ. ಅವರನ್ನು ನಾವು ಪ್ರೋತ್ಸಾಹಿಸಬೇಕು. ಮಕ್ಕಳ ಮನಸ್ಸು ಬಹಳ ಮೃದುವಾಗಿದ್ದು ನಾವು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತಾಗ ಅವರ ಭವನೆಗಳನ್ನು ಅರಿತುಕೊಳ್ಳಲು ಸಾಧ್ಯ. ಹಾಗೇ ಮಾಡುವುದರಿಂದ ಅವರ ಸುಪ್ತ ಪ್ರತಿಭೆ ಹೊರಬರಲು ಸಾಧ್ಯವಾಗುತ್ತದೆ. ಅವರಲ್ಲಿ ಹುದುಗಿದ ಅನೇಕ ಪ್ರತಿಭೆಗಳು ಹೊರಬರುತ್ತವೆ. ಅದಕ್ಕೆ ಪೋಷಕರು ಕಾರಣ ಕರ್ತರಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಚೋಟ ಚಾಂಪ್ಸ್ ಶಾಲೆಯ ಪ್ರಾಂಶುಪಾಲರಾದ ಚಂಗೇಟೀರ ಅಕ್ಕಮ್ಮ ಧನುಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಚೋಟ ಚಾಂಪ್ಸ್” ಗುರುಕುಲಂನ ಮುಖ್ಯಸ್ಥ ಧನು ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾತೃ ಎಜುಕೇಷನ್ ಟ್ರಸ್ಟ್ ಅಡಿಯಲ್ಲಿರುವ ವಿರಾಜಪೇಟೆಯ ವಿಜಯನಗರದಲ್ಲಿರುವ “ಚೋಟ ಚಾಂಪ್ಸ್” ಗುರುಕುಲಂ ಶಾಲೆಗೆ ತನ್ನದೇಯಾದ ಕಲಿಕಾ ಕೌಶಲ್ಯವಿದ್ದು, ಗುರುಕುಲ ಮಾದರಿಯಲ್ಲಿ ಪುಟ್ಟ ಮಕ್ಕಳಿಗೆ ಕಲಿಕೆಯನ್ನು ನೀಡಲಾಗುತ್ತಿದೆ. ಮಾತೃ ಎಜುಕೇಷನ್ ಟ್ರಸ್ಟ್’ನ ನೀತಿ ನಿಬಂಧನೆಗಳಿಗೆ ಒಳಪಟ್ಟು ಶಾಲೆಯನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಉತ್ತಮ ನಡೆನುಡಿ ಹಾಗೂ ಸಂಸ್ಕಾರವನ್ನು ಕಲಿಸುವ ಉದ್ದೇಶದಿಂದ ಕಳೆದ ಏಳು ವರ್ಷಗಳ ಹಿಂದೆ ಶಾಲೆಯನ್ನು ಆರಂಭಿಲಾಗಿದೆ. ನಮ್ಮ ಶಾಲೆಯ ಮಕ್ಕಳಿಗೆ ಶಿಕ್ಷಣ ಜೊತೆಯಲ್ಲಿ ಕೆಲವು ಧಾರ್ಮಿಕ ವಿಚಾರವನ್ನು ಕೂಡ ಬೋಧನೆಗಳನ್ನು ಹೇಳಿಕೊಡುತ್ತೇವೆ ಎಂದರು.
ವಾರ್ಷಿಕೋತ್ಸವ ಪ್ರಯುಕ್ತ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಚೋಟಾ ಚಾಂಪ್ಸ್ ಗುರುಕುಲಂನ ಪುಟ್ಟ ಮಕ್ಕಳು, ಪೋಷಕರು ಭಾಗವಹಿಸಿದ್ದರು.
ಇದೇ ಸಂದರ್ಭ ಪುಟ್ಟ ಮಕ್ಕಳಿಂದ ವಿವಿಧ ನೃತ್ಯ ಪ್ರದರ್ಶನ ನಡೆಯಿತು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*