ಮಡಿಕೇರಿ ಫೆ.16 NEWS DESK : ಪೊನ್ನಂಪೇಟೆ ತಾಲೂಕು ಬಾಡಗರಕೇರಿಯ ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ಫೆ.19 ರಿಂದ 29 ರವರೆಗೆ ವಾರ್ಷಿಕೋತ್ಸವ ನಡೆಯಲಿದೆ.
ಪ್ರತಿ ದಿನ ಬೆಳಿಗ್ಗೆ 5 ಗಂಟೆಯಿಂದ ವಿಶೇಷ ಪೂಜೆಗಳು, ಅಭಿಷೇಕ, ಇರುಬೆಳಕು, ನಿತ್ಯ ಪೂಜೆ ತುಲಭಾರ ನಡೆಯಲಿದ್ದು, ಸಂಜೆ 7 ರ ನಂತರ ತುಚಂಬಲಿ, ಉತ್ಸವ ಮೂರ್ತಿಯ ಪ್ರದಕ್ಷಿಣೆ, ದರ್ಶನ ಜರಗಲಿದೆ.
ವಾರ್ಷಿಕೋತ್ಸವದ ಕೊನೆಯ ದಿನವಾದ ಫೆ.29ರಂದು ವಿಶೇಷ ಪೂಜೆಗಳೊಂದಿಗೆ ಮಧ್ಯಾಹ್ನ 3 ಗಂಟೆಗೆ ಶಾಸ್ತ್ರೋತ್ತವಾಗಿ 12 ತೆಂಗಿನಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮ ನಡೆಯಲಿದೆ.
ಸಂಜೆ 5 ಗಂಟೆಗೆ ಉತ್ಸವ ಮೂರ್ತಿಯ ದರ್ಶನ, ಅವಬ್ರತ್ ಸ್ಥಾನ, ರಾತ್ರಿ 8.30 ಗಂಟೆಗೆ ಊರಿನ ಎಲ್ಲಾ ಮಹಿಳೆಯರು ಸಾಂಪ್ರದಾಯಿಕ ಉಡುಗೆಯೊಂದಿಗೆ ಉತ್ಸವ ಮೂರ್ತಿಯನ್ನು ಸ್ವಾಗತಿಸುವ ಕಾರ್ಯಕ್ರಮ ಜರಗಲಿದೆ. ಸಂಜೆ 6 ಗಂಟೆಯಿಂದ ಶ್ರೀನಿವಾಸ ತಂಡದವರಿಂದ ಭಕ್ತಿಗೀತೆಗಳ ಕಾರ್ಯಕ್ರಮ, ವಿಶೇಷ ಅಲಂಕಾರ ಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.
ಪ್ರತಿದಿನ ಭಕ್ತಾದಿಗಳಿಗೆ ಬೆಳಿಗ್ಗೆ ಮಧ್ಯಾಹ್ನ ಹಾಗೂ ರಾತ್ರಿ ತೀರ್ಥ ಪ್ರಸಾದ ಹಾಗೂ ಅನ್ನದಾನ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ತಕ್ಕ ಮುಖ್ಯಸ್ಥರು, ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.