Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನಾ ಭಾಷಣ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನಾ ಭಾಷಣ

ಫೆಬ್ರವರಿ 16, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಬೆಂಗಳೂರು ಫೆ.16 NEWS DESK : ಸನ್ಮಾನ್ಯ ಸಭಾಧ್ಯಕ್ಷರೆ,
1. ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ.
2. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 1೫ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ.
3. ಡಾ|| ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ.
4. ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ ಸಮಾಜ ನಿರ್ಮಾಣದಲ್ಲಿ ಬಸವಾದಿ ಶರಣರ ಕಾಯಕ ಮತ್ತು ದಾಸೋಹ ತತ್ವಗಳು ನಮಗೆ ಪ್ರೇರಣೆಯಾಗಿದೆ. ದುಡಿಮೆಯ ಒಂದು ಭಾಗವನ್ನು ದಾಸೋಹಕ್ಕೆ ಬಳಸಬೇಕೆಂಬ ಶರಣರ ಚಿಂತನೆ, ಸಮಾಜದಲ್ಲಿ ಸಂಪತ್ತಿನ ನ್ಯಾಯಯುತ ಹಂಚಿಕೆ ಮಾಡುವ ನಮ್ಮ ಆಶಯಕ್ಕೆ ಆಧಾರವಾಗಿದೆ.
ಆಗದು ಎಂದು; ಕೈಲಾಗದು ಎಂದು
ಕೈಕಟ್ಟಿ ಕುಳಿತರೆ
ಸಾಗದು ಕೆಲಸವು ಮುಂದೆ
ಮನಸೊಂದಿದ್ದರೆ ಮಾರ್ಗವು ಉಂಟು
ಕೆಚ್ಚೆದೆ ಇರಬೇಕೆಂದು
5. ವರನಟ ಡಾ|| ರಾಜ್‌ಕುಮಾರ್‌ ಅಭಿನಯದ ಹಾಗೂ ಆರ್.ಎನ್.ಜಯಗೋಪಾಲ್‌ ರಚಿಸಿದ ಬಂಗಾರದ ಮನುಷ್ಯ ಚಿತ್ರದ ಈ ಹಾಡಿನಂತೆ ದೇಶದ ಯಾವುದೇ ಸರ್ಕಾರ ಜಾರಿಗೊಳಿಸದ ಅತ್ಯಂತ ಬೃಹತ್‌ ಪ್ರಮಾಣದ ನೇರ ನೆರವು ನೀಡುವ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಶ್ರೇಯ ನಮ್ಮದಾಗಿದೆ. ನಮ್ಮ ಮಹತ್ವಾಕಾಂಕ್ಷೆಯ ಗ್ಯಾರಂಟಿಗಳು ಜನರ ಆಶೋತ್ತರಗಳನ್ನು ಆಧರಿಸಿವೆ.
6. ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ನಮ್ಮ ಯುಪಿಎ ಸರ್ಕಾರವು ಜನರ ಆಹಾರ, ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ವಾಸದ ಭದ್ರತೆಗಾಗಿ ವಿವಿಧ ಜನಕೇಂದ್ರಿತ ಯೋಜನೆಗಳು ಹಾಗೂ ಕಾನೂನುಗಳನ್ನು ರೂಪಿಸಿ ಬಡಜನರಿಗೆ ನ್ಯಾಯ ಒದಗಿಸುವ ಕಾರ್ಯಗಳನ್ನು ಕೈಗೊಂಡಿತ್ತು. ಆದರೆ, ಹಿಂದಿನ ೧೦ ವರ್ಷಗಳ ಅವಧಿಯಲ್ಲಿನ ಕೇಂದ್ರ ಸರ್ಕಾರದ ಜನವಿರೋಧಿ ನಿಲುವುಗಳಿಂದಾಗಿ  ಅಸಮಾನತೆ ಹೆಚ್ಚಳ, ಕೆಲವೇ ಜನರ ಬಳಿ ಸಂಪತ್ತಿನ ಶೇಖರಣೆ ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ಹೆಚ್ಚುತ್ತಿರುವ ಪ್ರಭಾವ ಮುಂತಾದ ಅನಪೇಕ್ಷಿತ ಬೆಳೆವಣಿಗೆಗಳಿಗೆ ಎಡೆ ಮಾಡಿದೆ.
7. ಅದಕ್ಕಾಗಿಯೇ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಂಡ ಕೇಂದ್ರ ಸರ್ಕಾರ ಮಾಡದ ಕೆಲಸವನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ. ನಾವು ರೂಪಿಸಿದ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್‌ ಅಲ್ಲ. ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಜನಾಭಿಪ್ರಾಯದ ಫಲವಾಗಿದೆ. ಇದು ಉದ್ಯೋಗ ಸೃಜಿಸಿ, ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಿಸುವ ಪ್ರಯತ್ನವಾಗಿದೆ. ನಿಷ್ಪಕ್ಷಪಾತ ಮತ್ತು ನ್ಯಾಯಯುತ ಸಮಾಜ ನಿರ್ಮಾಣಕ್ಕಾಗಿ ಸಂಪತ್ತಿನ ಮರುಹಂಚಿಕೆ ಮಾಡುವ ಕಾರ್ಯಕ್ರಮಗಳು ಇವಾಗಿವೆ.
ಸರ್ವೋದಯ ದೃಷ್ಟಿ ಮತ್ತು ಸಮನ್ವಯ ದೃಷ್ಟಿ ಎಲ್ಲೆಲ್ಲೂ ತಾಂಡವವಾಡಬೇಕು. ಮತ ಮತಗಳಲ್ಲಿ, ಸಾಹಿತ್ಯ ಸಾಹಿತ್ಯಗಳಲ್ಲಿ ಸಮಾಜ ಸಮಾಜಗಳಲ್ಲಿ – ಅಷ್ಟೇ ಏಕೆ? ರಾಜಕೀಯ ಕ್ಷೇತ್ರದಲ್ಲಿ ಆರ್ಥಿಕ ಕ್ಷೇತ್ರದಲ್ಲಿ, ಸರ್ವತ್ರ ಅದು ವ್ಯಾಪಿಸಬೇಕು. ಅತ್ಯಂತ ಕೀಳಾದವನಿಗೂ ಮೇಲಾಗುವ ಅವಕಾಶವಾಗಬೇಕು. ಇವೆರಡನ್ನೂ ಒಳಗೊಂಡ ಆಧ್ಯಾತ್ಮಿಕ ದೃಷ್ಟಿಯೇ ಪೂರ್ಣದೃಷ್ಟಿ.
            – ಕುವೆಂಪು
8. 2024-25 ರಲ್ಲಿ 52,000 ಕೋಟಿ ರೂ. ಗಳನ್ನು ಐದು ಗ್ಯಾರಂಟಿಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಾಂತರ ಜನರ ಕೈಗೆ ಹಂಚಿಕೆ ಮಾಡಲಾಗುತ್ತಿದೆ. ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 5೦,000 ದಿಂದ 55,000 ರೂ. ಗಳನ್ನು ಒದಗಿಸಲಾಗುತ್ತಿದೆ.
9. ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ಮೆಚ್ಚುಗೆಯ ನೋಟ ಬೀರಿದೆ. ಸಮಯ ಕಳೆದಂತೆ ಇದರ ಆರ್ಥಿಕ ಮತ್ತು ಸಾಮಾಜಿಕ ಅನುಕೂಲಗಳು ಇನ್ನಷ್ಟು ಸ್ಪಷ್ಟವಾಗಿ ಗೋಚರಿಸಲಿವೆ. ಹಲವು ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ನಮ್ಮ ಕೆಲಸದ ಅಧ್ಯಯನ ನಡೆಸಿ, ಶ್ಲಾಘಿಸಿವೆ. ಆದರೆ ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆ ದೃಢವಾಗಲು  ಕೇವಲ ಈ ಅಧ್ಯಯನಗಳಷ್ಟೇ ಕಾರಣವಲ್ಲ;  ಬಸ್‌ ಹತ್ತುವ ಮುನ್ನ ತಲೆಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ, ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಲಕ್ಷಾಂತರ ಮಹಿಳೆಯರ ಪ್ರಾರ್ಥನೆ, ಯುವನಿಧಿಯಡಿ ನೆರವು ಪಡೆದ ನಿರುದ್ಯೋಗಿ ಯುವಕನ ಆನಂದಬಾಷ್ಪ- ಇವು ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆಯನ್ನು ಇನ್ನಷ್ಟು ಬಲಪಡಿಸಿದೆ. ಅಭಿವೃದ್ಧಿಯ ಫಲವನ್ನು ಅದರ ಹಕ್ಕುದಾರರಾದ ಜನಸಾಮಾನ್ಯರಿಗೆ ಹಿಂತಿರುಗಿಸುವುದರಲ್ಲಿ ಅನನ್ಯವಾದ ಸಂತೃಪ್ತಿಯಿದೆ.
10. ಆದರೆ ವಿರೋಧಿಗಳು ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳೆಂದು ಬಣ್ಣಿಸಿ ರಾಜ್ಯ ದಿವಾಳಿಯಾಗಿದೆ, ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನಮ್ಮ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಸಂಕಷ್ಟಗಳಿಗೆ ಸ್ಪಂದಿಸಲಾಗದವರು ತಮ್ಮ ಹುಳುಕನ್ನು ಮುಚ್ಚಿಹಾಕಲು ಇಂತಹ ಟೀಕೆಗಳನ್ನು ಮಾಡುತ್ತಿದ್ದಾರೆ. ಇನ್ನೊಂದೆಡೆ ನಮ್ಮ ಗ್ಯಾರಂಟಿಗಳನ್ನು ಕದ್ದು ಅವರ ಗ್ಯಾರಂಟಿಗಳೆಂದು ನಂಬಿಸಲು ಹೆಣಗಾಡುತ್ತಿರುವುದು ವಿಪರ್ಯಾಸ. ಇಂತಹ ಟೀಕೆಗಳಿಗೆ ನಾನಲ್ಲ; ಶರಣರೇ ಉತ್ತರ ನೀಡಿದ್ದಾರೆ:
ಮನ ಶುದ್ಧವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ
ಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿ
ಸದ್ಭಕ್ತಂಗೆ ಎತ್ತ  ನೋಡಿದಡತ್ತ ಲಕ್ಷ್ಮಿ ತಾನಾಗಿಪ್ಪಳು
ಮಾರಯ್ಯ ಪ್ರಿಯ ಅಮರೇಶ್ವರ ಲಿಂಗದ ಸೇವೆಯುಳ್ಳನ್ನಕ್ಕರ
           – ಆಯ್ದಕ್ಕಿ ಲಕ್ಕಮ್ಮ
ಗ್ಯಾರಂಟಿ ಯೋಜನೆಯೊಂದಿಗೆ ಅಭಿವೃದ್ಧಿಯ ಮುನ್ನೋಟ (Guarantees and Beyond)
11. ಭವಿಷ್ಯದ ಕುರಿತ ನಮ್ಮ ದೂರದೃಷ್ಟಿ ಗ್ಯಾರಂಟಿ ಯೋಜನೆಗಳಿಗಷ್ಟೇ ಸಿಮೀತವಾಗಿರುವುದಿಲ್ಲ. ಇಷ್ಟು ದೊಡ್ಡ ಮಟ್ಟದ ಗ್ಯಾರಂಟಿ ಯೋಜನೆಗಳ ಮಧ್ಯೆಯೂ ನಮ್ಮ ಸರ್ಕಾರದ ಒಂಭತ್ತು ತಿಂಗಳ ಅವಧಿಯಲ್ಲಿ ಸುಮಾರು 21,168 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಸಚಿವ ಸಂಪುಟದ ಅನುಮೋದನೆ ನೀಡಿದ್ದೇವೆ ಮತ್ತು ಹಿಂದೆ ಅನುಮೋದನೆಗೊಂಡ ಕಾಮಗಾರಿಗಳ 2,230 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಿದ್ದೇವೆ.
2,188 ಕೋಟಿ ರೂ.ಗಳ ಕ್ರಿಯಾ ಯೋಜನೆಗೂ ಅನುಮೋದನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಹಾಗೂ ತ್ವರಿತ ಆರ್ಥಿಕ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣಕ್ಕೆ ನಾವು ಒತ್ತು ನೀಡಿದ್ದೇವೆ. ಆರ್ಥಿಕ ಅಭಿವೃದ್ಧಿಗೆ ಪೂರಕ ಮೂಲಸೌಕರ್ಯಗಳಾದ ಎಕ್ಸ್‌ಪ್ರೆಸ್‌ವೇ, ಅತ್ಯುತ್ತಮ ಗ್ರಾಮೀಣ ರಸ್ತೆಗಳು, ವಿಶ್ವದರ್ಜೆಯ ವಿಮಾನ ನಿಲ್ದಾಣಗಳು, ಕೈಗಾರಿಕಾ ಕಾರಿಡಾರ್‌ಗಳು ಮತ್ತು ನಗರ ಪ್ರದೇಶಗಳಲ್ಲಿ ಅತ್ಯುತ್ತಮ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರೂಪಿಸಲು ಅಗತ್ಯ ಸಂಪನ್ಮೂಲ ಕ್ರೋಢೀಕರಿಸಲಾಗುವುದು. ವಿದ್ಯುತ್‌ ಉತ್ಪಾದನೆಯಲ್ಲಿ ಮತ್ತೆ ಮುಂಚೂಣಿಯ ರಾಜ್ಯವಾಗಿ ಹೊರಹೊಮ್ಮಲು ಇಂಧನ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡಲಾಗುವುದು.
12. ಬೆಂಗಳೂರು ನಗರವನ್ನು ವಿಶ್ವದರ್ಜೆಯ ಮೂಲಸೌಕರ್ಯ ಒದಗಿಸುವ ಮೂಲಕ ಜಾಗತಿಕ ಮಟ್ಟದ ನಗರವಾಗಿ ಅಭಿವೃದ್ಧಿಪಡಿಸಲಾಗುವುದು. ಐಟಿ ಮತ್ತು ಬಿಟಿ ವಲಯ, ಕೃತಕ ಬುದ್ಧಿಮತ್ತೆ, ರೊಬೊಟಿಕ್ಸ್‌, ಸೆಮಿ-ಕಂಡಕ್ಟರ್‌, ಆಟೋಮೊಬೈಲ್‌ ಮತ್ತು ಇತರ ಪ್ರವರ್ಧಮಾನಕ್ಕೆ ಬರುತ್ತಿರುವ ವಲಯಗಳ ಜಾಗತಿಕ ಪ್ರತಿಭೆಗಳನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು. ಈ ವಿಷಯದಲ್ಲಿ ನಾವು ದೇಶಕ್ಕೇ ಮಾದರಿಯಾಗಿ ಕಾರ್ಯನಿರ್ವಹಿಸಲಿದ್ದೇವೆ. ಇದು ನಮ್ಮ ಕಾಯಕ.
13. ಮಾನವ ಸಂಪನ್ಮೂಲ ಅಭಿವೃದ್ಧಿಗೆ ತಳಪಾಯವಾದ ಶಿಕ್ಷಣ, ಆರೋಗ್ಯ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅತ್ಯುತ್ತಮ ಗುಣಮಟ್ಟದ ಶಾಲೆಗಳನ್ನು ಅಭಿವೃದ್ಧಿಪಡಿಸಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ, ಅವರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವ್ಯವಸ್ಥೆ ರೂಪಿಸಲಿದೆ. ನಮ್ಮ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಸ್ಥಳೀಯವಾಗಿಯೇ ಅತ್ಯುತ್ತಮ ಪ್ರಾಥಮಿಕ ಆರೋಗ್ಯ ಸೇವೆಗಳು ಹಾಗೂ ಸೂಪರ್‌-ಸ್ಪೆಷಾಲಿಟಿ ಆಸ್ಪತ್ರೆಗಳ ಸೇವೆಗಳನ್ನು ದೊರಕಿಸಲಿದೆ. ಕೌಶಲ್ಯಾಭಿವೃದ್ಧಿ ವಲಯದಲ್ಲಿ ಯುವನಿಧಿ ಮತ್ತು ಯುವನಿಧಿ ಪ್ಲಸ್ ಉಪಕ್ರಮಗಳ ಜೊತೆಗೆ ಮುಂದಿನ 5 ವರ್ಷಗಳಲ್ಲಿ ಯುವಜನರು ಉದ್ಯಮದ ಬೇಡಿಕೆಗೆ ತಕ್ಕಂತ ಉದ್ಯೋಗಗಳಿಗೆ ಸಜ್ಜಾಗಲಿದ್ದಾರೆ. ಈ ಉಪಕ್ರಮಗಳಿಗೆ ನಮ್ಮ ಬದ್ಧತೆ ಅಚಲವಾದುದು.
14. ಈ ಎಲ್ಲಾ ದಿಟ್ಟ ಹಾಗೂ ದೂರದೃಷ್ಟಿಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ದಕ್ಷ ಹಾಗೂ ಸಂಕಲ್ಪಶಕ್ತಿಯುಳ್ಳ ಆಡಳಿತ ವ್ಯವಸ್ಥೆಯನ್ನು ಹೊಂದುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಸಾಂಸ್ಥಿಕ ಸುಧಾರಣೆಗಳು, ವಿಕೇಂದ್ರೀಕರಣ, ಹೊಣೆಗಾರಿಕೆ ಹಾಗೂ ಫಲಿತಾಂಶ ಆಧಾರಿತ ಆಡಳಿತದ ಮೂಲಕ ಆಡಳಿತ ವ್ಯವಸ್ಥೆಯ ಕುರಿತು ಜನರಲ್ಲಿ ಮತ್ತೆ ವಿಶ್ವಾಸ ಮೂಡಿಸುವುದು ನಮ್ಮ ಆಶಯವಾಗಿದೆ.
15. ಅಭಿವೃದ್ಧಿಯ ಈ ನೀಲ ನಕಾಶೆಯನ್ನು ಯಶಸ್ವಿಯಾಗಿ ವಾಸ್ತವಕ್ಕಿಳಿಸಲು ಅವಿರತವಾಗಿ ಮುಂದಿನ ನಾಲ್ಕು ವರ್ಷ ಶ್ರಮಿಸುತ್ತೇವೆ. ವಿನೂತನ ಚಿಂತನೆಗಳು, ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಬಸವಣ್ಣ ಮತ್ತು ಅಂಬೇಡ್ಕರ್‌ ಅವರ ಹಾದಿಯಲ್ಲಿ ಕ್ರಾಂತಿಕಾರಿ ಹೆಜ್ಜೆಗಳನ್ನಿಡಬೇಕಾಗಿದೆ. ಈ ಆಯವ್ಯಯವು ನಮ್ಮ ರಾಜ್ಯದ ಮುಂದಿನ ನಡೆಯನ್ನು ನಿರೂಪಿಸುತ್ತದೆ. ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಪರ್ವವನ್ನೊಳಗೊಂಡ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ಒಂದು ದಶಕದ ಹಾದಿಯನ್ನು ನಿಚ್ಚಳಗೊಳಿಸಲಿದೆ.
16. ಈ ಆಯವ್ಯಯವು ಗ್ಯಾರಂಟಿ ಯೋಜನೆಗಳೊಂದಿಗೆ ಉದ್ಯೋಗ ಸೃಜನೆ, ಶಿಕ್ಷಣ, ಆರೋಗ್ಯ, ಹಸಿವು ನಿವಾರಣೆ, ಕೃಷಿ ಮತ್ತು ನೀರಾವರಿಗೆ ಪ್ರೋತ್ಸಾಹ, ಮೂಲಸೌಕರ್ಯ ಅಭಿವೃದ್ಧಿ ಮತ್ತಿತರ ವಲಯಗಳ ಅಭಿವೃದ್ಧಿಗೆ ಒತ್ತು ನೀಡಲಿದೆ. ಎಲ್ಲಾ ದುರ್ಬಲ ವರ್ಗದ ಜನರಿಗೆ ಗೌರವಯುತ ಸ್ಥಾನಮಾನ ದೊರಕಿಸಲು ಆದ್ಯತೆ ನೀಡಲಿದೆ. ಈ ಆಯವ್ಯಯವು ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.