Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು
ಇತ್ತೀಚಿನ ಸುದ್ದಿಗಳು ಕರ್ನಾಟಕ

ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು

ಫೆಬ್ರವರಿ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಬೆಂಗಳೂರು ಫೆ.16 NEWS DESK *ಅಲ್ಪಸಂಖ್ಯಾತರ ಕಲ್ಯಾಣ*
184. ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು;
• 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
• 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.
• 100 ಹೊಸ ಮೌಲಾನಾ ಆಜಾದ್‌ ಶಾಲೆಗಳನ್ನು ತೆರೆಯಲಾಗುವುದು.
• ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು.
185. ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್‌/ ಜಿ.ಎನ್‌.ಎಂ ನರ್ಸಿಂಗ್‌ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು.
186. ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ
10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು.
187. ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು.
188. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು.
189. ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್‌ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು.
190. ವಕ್ಫ್‌ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗುವುದು.
191. ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು.
192. ಮಂಗಳೂರಿನ ಹಜ್‌ ಭವನದ ನಿರ್ಮಾಣ ಕಾಮಗಾರಿಯನ್ನು
10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
193. ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.
194. ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಒದಗಿಸಲಾಗುವುದು.
195. ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ ಒದಗಿಸಲಾಗುವುದು.
196. ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ಖ್‌ ಲಿಗಾರ್‌ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆಗಳನ್ನು ರೂಪಿಸಲಾಗುವುದು.
197. ಬೀದರ್‌ನಲ್ಲಿರುವ ಶ್ರೀ ನಾನಕ್‌ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ ನೀಡಲಾಗುವುದು.
198. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.