ಪುತ್ತೂರು ಫೆ.16 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಪದ ಸ್ವೀಕಾರ ಮಾಡಿದ್ದಾರೆ. ಹದಿನೆಂಟು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು.












