ಮಡಿಕೇರಿ ಫೆ.16 NEWS DESK : ಕಾಯಕ ಶರಣರು, ಸವಿತಾ ಮಹರ್ಷಿಯವರು ಹಾಗೂ ಸಂತ ಸೇವಾಲಾಲ್ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಕಾಯಕ ಶರಣರ, ಶ್ರೀ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತಾಡಿದರು.
ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಶರಣರು ಹಾಗೂ ಪವಾಡ ಪುರುಷರು ಶ್ರಮಿಸಿದ್ದು, ಈ ಮಹನೀಯರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ನಗರಸಭೆ ಅಧ್ಯಕ್ಷರು ನುಡಿದರು.
ಸವಿತಾ ಸಮಾಜವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಿದ್ದಾರೆ. ರಾಷ್ಟ್ರಕೂಟ, ವಿಜಯನಗರ ಚಾಲುಕ್ಯರ ಶಾಸನದಲ್ಲಿ ಸವಿತಾ ಸಮಾಜದವರ ಬಗ್ಗೆ ಉಲ್ಲೇಖವಿದೆ. ಅನೇಕ ಶಾಸನಗಳ ಮೇಲೆ ಸವಿತಾ ಸಮಾಜದ ಸಾದನಗಳಾದ ಕತ್ತಿ, ಕನ್ನಡಿ ಮತ್ತು ಕತ್ತರಿಗಳನ್ನು ಕೆತ್ತಲಾಗಿದೆ ಎಂದು ಅನಿತಾ ಪೂವಯ್ಯ ವಿವರಿಸಿದರು.
`ಕಾಯಕ ಶರಣರು 12ನೇ ಶತಮಾನದಲ್ಲಿ ಸಮಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ. ಸಂತ ಸೇವಾಲಾಲ್ ಅವರು ಸಹ ಸಮಾಜದಲ್ಲಿ ಸಮಾನತೆ ನಿರ್ಮಾಣ ಮಾಡಿ, ಇತರರಂತೆ ಎಲ್ಲರೂ ಬದುಕು ಕಟ್ಟಿಕೊಳ್ಳಬೇಕು ಎಂಬುದನ್ನು ಸಾರಿದ್ದಾರೆ ಎಂದು ಅನಿತಾ ಪೂವಯ್ಯ ನುಡಿದರು.
ನಿವೃತ್ತ ಪ್ರಾಧ್ಯಾಪಕರಾದ ಬಿ.ಸಿ.ಶಂಕರಯ್ಯ ಮಾತನಾಡಿ, ಸವಿತಾ ಸಮಾಜವನ್ನು ಯಾವುದೇ ಮದುವೆ ಸೇರಿದಂತೆ ಶುಭ ಕಾರ್ಯಗಳಿಗೆ ಆಹ್ವಾನಿಸುತ್ತಾರೆ. ಸವಿತಾ ಸಮಾಜದವರು ಸಂಘಟಿತರಾಗಿ ಮುಖ್ಯವಾಹಿನಿಗೆ ಬರಬೇಕು ಎಂದರು.
ಸಂತ ಸೇವಾ ಅವರು ಈಗಿನ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೊಪ್ಪ ಎಂಬಲ್ಲಿ ಜನಿಸಿದ್ದಾರೆ ಎಂದರು. ಸೂರಗೊಂಡನ ಕೊಪ್ಪವನ್ನು ಭಾಯಗಢ ಎಂದು ಕರೆಯಲಾಗುತ್ತದೆ. ಸಂತ ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ ಎಂದರು.
ಮಾದರ ಚನ್ನಯ್ಯ ಅವರು 12ನೇ ಶತಮಾನದ ಬಸವಾದಿ ಶರಣರ ಆಚಾರ ವಿಚಾರಗಳಿಂದ ಪ್ರಭಾವಿತರಾಗಿ ಕಲ್ಯಾಣಕ್ಕೆ ಬಂದು ಅಲ್ಲಿ ತನ್ನ ಕುಲ ಕಾಯಕವಾದ ಚರ್ಮಗಾರಿಕೆಯನ್ನು ಮುಂದುವರಿಸುತ್ತಾರೆ ಎಂದು ಬಿ.ಸಿ.ಶಂಕರಯ್ಯ ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟರಾಜ್ ಮಾತನಾಡಿ, ಸಮಾಜ ಸುಧಾರಣೆಗಾಗಿ ಶ್ರಮಿಸಿದ ಕಾಯಕ ಶರಣರು, ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿಗಳು ಹೀಗೆ ಹಲವು ಮಹನೀಯರ ವಿಚಾರಧಾರೆಗಳನ್ನು ತಿಳಿದುಕೊಂಡು ಅಭಿವೃದ್ಧಿಯತ್ತ ಸಾಗಬೇಕೆಂದು ಸಲಹೆ ಮಾಡಿದರು.
ಕಾಯಕ ಶರಣರು, ಸವಿತಾ ಮಹರ್ಷಿಗಳು ಹಾಗೂ ಸಂತ ಸೇವಾಲಾಲ್ ಅವರು ಕಾಯಕವೇ ಕೈಲಾಸ ಎಂಬುದನ್ನು ಸಾರಿದ್ದಾರೆ. ಬದುಕಿನ ಅವಧಿಯಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದರು.
ಸಂತ ಸೇವಾಲಾಲರು ಕಾಯಕ ಶರಣರು 12ನೇ ಶತಮಾನದಲ್ಲಿ ಸಮಾಜದ ಅಂಕು ಡೊಂಕುಗಳನ್ನು ತಿದ್ದಲು ಶ್ರಮಿಸಿದ್ದಾರೆ ಎಂದರು.
ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೆ.ಎಸ್.ದೊರೇಶ್, ತಾಲ್ಲೂಕು ಅಧ್ಯಕ್ಷ ಮಧು, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ್ ಜಿಲ್ಲ್ಲಾ ಪಂಚಾಯತ್ ಎಂಜಿನಿಯರ್ ಮುತ್ತುರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕಾರ್ಯಕ್ರಮ ಅಧಿಕಾರಿ ಕೃಷ್ಣಪ್ಪ, ವಿಕಲಚೇತನ ಅಧಿಕಾರಿ ನಿರ್ಮಲ, ಸವಿತಾ ಸಮಾಜದ ಪ್ರತಿನಿಧಿಗಳು ಇತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಾರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಕಲಾವಿದರಾದ ಈ.ರಾಜು ಮತ್ತು ತಂಡದವರು ಪ್ರಾರ್ಥಿಸಿದರು, ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.
Breaking News
- *ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ*
- *ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ ಸಿದ್ದರಾಮಯ್ಯ ಕರೆ*
- *ಸುತ್ತೂರು ಮಠದ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ*
- *ಸುಂಟಿಕೊಪ್ಪ : ಸ್ವರ್ಣಾಲಯದಲ್ಲಿ ಗಾಂಧಿ ಸ್ಮರಣೆ*
- *ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಕೆ.ಎಸ್.ಮೂರ್ತಿ ಆಯ್ಕೆ*
- *ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಸಿ.ಎಂ.ಚಿಣ್ಣಪ್ಪ ಆಯ್ಕೆ*
- *ತೀರ್ಪುಗಾರರಾಗಿ ಕೊಡಗಿನ ಹರ್ಷಿತ್ ಅಯ್ಯಪ್ಪ ನೇಮಕ*
- *ಭಾಗಮಂಡಲ ಮೇಲ್ಸೇತುವೆಗೆ ಕೆದಂಬಾಡಿ ರಾಮಯ್ಯ ಗೌಡರ ಹೆಸರಿಡಲು ಮನವಿ*
- *ಹಿಂದು ಯುವ ಸಮೂಹದ ಜಾಗೃತಿಗಾಗಿ ಮಡಿಕೇರಿಯಲ್ಲಿ ಜಾಗೃತಿ ಬೈಕ್ ಜಾಥಾ*
- *ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ : ನೂತನ ರಾಜಗೋಪುರ ಉದ್ಘಾಟನೆ*