ಮಡಿಕೇರಿ ಫೆ.16 NEWS DESK : ಇತ್ತೀಚೆಗೆ ಸುಂಟಿಕೊಪ್ಪದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಚಿಕ್ಕಮಂಡೂರು ಗ್ರಾಮದ ನಿವಾಸಿ ಮೊಹಮ್ಮದ್ ಅಶ್ರಫ್ (43) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿಂದ ರೂ.15 ಸಾವಿರ ನಗದು, ವಾಚ್ ಮತ್ತು ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದೇ ಫೆ.28 ರಂದು ಸುಂಟಿಕೊಪ್ಪದ ನಿವಾಸಿ ಕೆ.ಎಂ.ಹಸೈನಾರ್ ಅವರ ಟಿನೇಜ್ ಕಲೆಕ್ಷನ್ಸ್ ಬಟ್ಟೆ ಅಂಗಡಿಯ ಬೀಗವನ್ನು ಮುರಿದು ಕ್ಯಾಶ್ ಟೇಬಲ್ನಲ್ಲಿದ್ದ ರೂ.1ಲಕ್ಷ ನಗದು, ವಾಚ್ ಮತ್ತು ಬಟ್ಟೆಗಳನ್ನು ಕಳ್ಳತನ ಮಾಡಲಾಗಿತ್ತು. ಅಲ್ಲದೆ ಸುರೇಶ್.ಹೆಚ್.ಕೆ ಅವರ ಎ.ಆರ್ ಕನ್ಸಲ್ಟಿಂಗ್ ಅಂಗಡಿಯ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನೂ ಕದ್ದೊಯ್ಯಲಾಗಿತ್ತು.
ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಚೋರರ ಪತ್ತೆಗಾಗಿ ಕ್ರಮ ಕೈಗೊಂಡಿದ್ದರು. ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್.ಕೆ, ಸುಂಟಿಕೊಪ್ಪ ಠಾಣೆಯ ಪಿಎಸ್ಐಗಳಾದ ಶ್ರೀಧರ್.ಎಂ.ಸಿ, ನಾಗರಾಜು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.
ಸದರಿ ಎರಡು ಪ್ರಕರಣಗಳ ಮತ್ತೊಬ್ಬ ಆರೋಪಿ ಇಜಾಜ್ ಎಂಬುವವನನ್ನು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳವು ಪ್ರಕರಣದಲ್ಲಿ ಈಗಾಗಲೇ ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
::: ಮಾಹಿತಿ ನೀಡಿ :::
ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಎಸ್ಪಿ ಮನವಿ ಮಾಡಿದ್ದಾರೆ. ಕೆ.ಎಸ್.ಪಿ ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಕೋರಿದ್ದಾರೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Breaking News
- *ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಮುಂಖಡರ ಸಭೆ*
- *ಸುಂಟಿಕೊಪ್ಪ : ಆರೋಗ್ಯ ಸಮಸ್ಯೆಗೆ ಫುಟ್ ಪಲ್ಸ್ ಥೆರಪಿ ರಾಮಬಾಣ : ರತ್ನಾಕರ ಶೆಟ್ಟಿ*
- *ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಬೆಂಚ್-ಡೆಸ್ಕ್ ಕೊಡುಗೆ*
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*