ಮಡಿಕೇರಿ ಫೆ.17 NEWS DESK : ಮಡಿಕೇರಿ ನಗರದ ಕೃಷ್ಣ ವೈನ್ಸ್ ಮಾಲೀಕರಾದ ಕೆ.ರಮೇಶ ಅವರ ಪುತ್ರ ಕೆ.ಆರ್.ತೇಜಸ್ (37) ಶುಕ್ರವಾರ ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಫೆ.17 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಮೃತರು ತಂದೆ, ತಾಯಿ, ಸಹೋದರ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ ಎಂ.ಧನಂಜಯ್ ಸಂತಾಪ ಸೂಚಿಸಿದ್ದಾರೆ.









