ಮಡಿಕೇರಿ ಫೆ.17 NEWS DESK : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 22 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿಎಂಇಜಿಪಿ) ಯೋಜನೆಯಡಿ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಾಲ ಪಡೆಯುವವರಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲಾಗುವುದು. ಆದ್ದರಿಂದ ಆಸಕ್ತಿಯಿರುವ ನಿರುದ್ಯೋಗ ಯುವಕ ಯುವತಿಯರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಕೊಡಗು ಜಿಲ್ಲೆಯವರನ್ನು ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ: 08272- 228746 ಸಂಪರ್ಕಿಸಬಹುದಾಗಿದೆ ಎಂದು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.









