ಮಡಿಕೇರಿ ಫೆ.17 NEWS DESK : ಕೇಂದ್ರದ ಬಿಜೆಪಿ ಸರಕಾರ ರೈತ ದಮನಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಕಿಸಾನ್ ಘಟಕ ಜಂಟಿಯಾಗಿ ಪ್ರತಿಭಟನೆ ನಡೆಸಿತು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಮೂಲಕ ಪ್ರತಿಭಟನಾಕಾರರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ತಹಸೀಲ್ದಾರ್ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿದ ಕಾಂಗ್ರೆಸ್ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿ ಪ್ರತಿಭಟಿಸಿದರು.
ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕೇವಲ ಸುಳ್ಳು ಭರವಸೆಗಳ ಮೂಲಕ ದೇಶದ ಜನರನ್ನು ಮರುಳು ಮಾಡುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಶೂನ್ಯ ಆರೋಪಿಸಿದರು.
ಕಿಸಾನ್ ಘಟಕದ ಅಧ್ಯಕ್ಷ ವಿ.ಜೆ.ನವೀನ್, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡುರಾವ್, ನಟೇಶ್ ಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪ್ರಮುಖರಾದ ಜೋಸೆಫ್ ವಿಕ್ಟರ್ ಸೋನ್ಸ್, ಬಿ.ಡಿ.ಅಣ್ಣಯ್ಯ, ಕೃಷ್ಣಗೌಡ, ಚಂದ್ರಶೇಖರ್, ಮುಸ್ತಾಫ ಎಂ.ಇ. ಪ್ರಕಾಶ್, ಫಿಲೋಮಿನಾ, ಅರುಣ್ ರಾವ್, ಹರೀಶ್, ಮತ್ತಿತರರು ಇದ್ದರು.









