ಮಡಿಕೇರಿ ಫೆ.17 NEWS DESK : ಬಾಳೆಲೆ ಗ್ರಾ.ಪಂ ವತಿಯಿಂದ ಸಂವಿಧಾನ ಜಾಗೃತಿ ಜಾಥಾವನ್ನು ಸ್ವಾಗತಿಸಲಾಯಿತು.
ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಡಾ.ಬಿ.ಆರ್.ಆಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.
ಬಾಳೆಲೆ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಂವಿಧಾನ ಜಾಗೃತಿ ಜಾಥದ ರಥವು ಸಾಗಿಬಂತು, ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕ ಮಾದಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಜಾಗೃತಿ ಜಾಥಾ ಪ್ರತಿ ಗ್ರಾಮ ಪಂಚಾಯಿತಿಗೂ ತೆರಳುವ ಮೂಲಕ ಜನರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮತ್ತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗುತ್ತಿದೆ ಎಂದರು.
ಸರ್ಕಾರದ ವಿವಿಧ ಯೋಜನೆಗಳ ಬಗ್ಗೆಯೂ ಜನರಿಗೆ ಮಾಹಿತಿಗಳು ಲಭ್ಯವಾಗುತ್ತಿದೆ .ಈ ಜಾಥಕ್ಕೆ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಹಾಗೂ ಗ್ರಾಮ ಪಂಚಾಯಿತಿ ಸಹಕರ ನೀಡಿರುವುದನ್ನು ಶ್ಲಾಘಿಸಿದರು.
ವಿಜಯಲಕ್ಷ್ಮಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಡಿ.ಎನ್.ಸುಬ್ಬಯ್ಯ ಮಾತನಾಡಿ, ಭಾರತದ ಸಂವಿಧಾನ ರೀತಿಯಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ವಿಶ್ವದ ಯಾವುದೇ ದೇಶವು ಅಳವಡಿಸಲು ಸಾದ್ಯವಾಗಲಿಲ್ಲ. ನಮ್ಮ ದೇಶದ ಎಲ್ಲಾ ಪ್ರಜೆಗಳಿಗೂ ಸಮಾನವಾದ ಹಕ್ಕುಗಳಿದ್ದು, ಈ ತರಹನಾದ ಸಂವಿಧಾನ ಮತ್ತು ಪ್ರಜಾತಂತ್ರದ ಬುನಾದಿಯನ್ನು ಹಾಕುವುದರಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಶ್ರಮ ಮತ್ತು ಮೂಂದಾಲೋಚನೆ ಅವಿಸ್ಮರಣೇಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾಜಿಕವಾಗಿ ಮುಂದೆ ಬರಲು ಶಿಕ್ಷಣವೊಂದೇ ಮಾನದಂಡವೆಂದು ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಾಳೆಲೆ ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಸಂವಿಧಾನದ ಶ್ರೇಯಸ್ಸನ್ನು ಸಾರುವ ಅಕರ್ಷಕ ನೃತ್ಯ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಗ್ರಾ.ಪಂ ಅಧ್ಯಕ್ಷ ಮುಕ್ಕಾಟಿರ ಜಾನಕಿ ಕಾವೇರಪ್ಪ ಮಾತನಾಡಿದರು.
ಸಂವಿಧಾನ ಜಾಥದ ನೋಡಲ್ ಅಧಿಕಾರಿ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ನವೀನ್ ಕುಮಾರ್, ಬಾಳೆಲೆ ಗ್ರಾ.ಪಂ ಸದಸ್ಯರುಗಳಾದ ಅದೇಂಗಡ ವಿನು ಉತ್ತಪ್ಪ, ಪೊಡಮಾಡ ಸುಖೇಶ್ ಭೀಮಯ್ಯ, ಅಡ್ಡೇಂಗಡ ನವೀನ್, ಪುಷ್ಪಾವತಿ ಚಂದ್ರ, ಪ್ರಮುಖರಾದ ಪೊಡಮಾಡ ಮೋಹನ್ , ರಘು, ಗಣೇಶ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪ್ರಮುಖರು ವಿದ್ಯಾರ್ಥಿಗಳು,ಶಾಲಾ ಶಿಕ್ಷಕರು ಸಿಬ್ಬಂದಿಗಳು ಹಾಜರಿದ್ದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪರಮೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.