Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಂಪಾಜೆ, ಮಾದಾಪುರದಲ್ಲಿ ಕಳ್ಳತನ : ಅಂತರ್ ಜಿಲ್ಲಾ ಚೋರರ ಬಂಧನ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಸಂಪಾಜೆ, ಮಾದಾಪುರದಲ್ಲಿ ಕಳ್ಳತನ : ಅಂತರ್ ಜಿಲ್ಲಾ ಚೋರರ ಬಂಧನ

ಫೆಬ್ರವರಿ 17, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.17 NEWS DESK : ಸಂಪಾಜೆ ಮತ್ತು ಮಾದಾಪುರದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಲಮುರಿ ನಿವಾಸಿ ಸುದೀಪ್.ಟಿ.ಎಸ್ (23), ಎಂ.ಬಾಡಗ ನಿವಾಸಿ ನಿಶಾಂತ್ ಎಂ.ಎಂ (27) ಹಾಗೂ ನಾಪೋಕ್ಲು ಹಳೇ ತಾಲ್ಲೂಕು ನಿವಾಸಿ ಇಬ್ರಾಹಿಂ (29) ಬಂಧಿತ ಆರೋಪಿಗಳಾಗಿದ್ದಾರೆ.
ಇದೇ ಫೆ.8 ರಂದು ಸಂಪಾಜೆ ಗ್ರಾಮದ ನಿವಾಸಿ ವಿಜಯ್ ಕುಮಾರ್.ಕೆ.ಕೆ ಎಂಬುವವರ ಮನೆಯಲ್ಲಿ ಯಾರು ಇಲ್ಲದಿರುವ ಸಂದರ್ಭ ಬಾಗಿಲ ಬೀಗವನ್ನು ಮುರಿದು ಒಳ ನುಗ್ಗಿದ ಚೋರರು ಅಂದಾಜು 47 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ರೂ.20 ಸಾವಿರ ನಗದನ್ನು ಕಳವು ಮಾಡಿರುವ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿಗಳ ಬಳಿಯಿಂದ ಈ ಪ್ರಕರಣಕ್ಕೆ ಸಂಬAಧಿಸಿದAತೆ 30 ಗ್ರಾಂ 630 ಮಿಲಿ ಚಿನ್ನಾಭರಣ ಮತ್ತು ರೂ.4,860 ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಇದೇ ಫೆ.9 ರಂದು ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪುರ ಗ್ರಾಮದ ನಿವಾಸಿ ಜೀವನ್.ಡಿ ಅವರ ಮನೆಯಲ್ಲಿ ನಡೆದ ಪ್ರಕರಣದ ಆರೋಪಿಗಳು ಕೂಡ ಇವರು ಮೂವರೇ ಆಗಿದ್ದಾರೆ. ಈ ಪ್ರಕರಣದಲ್ಲಿ ಅಂದಾಜು 100 ಗ್ರಾಂ ತೂಕದ ಚಿನ್ನಾಭರಣಗಳು, ರೂ.1.20 ಲಕ್ಷ ನಗದು ಮತ್ತು ಜಮೀನಿನ ಮೂಲ ದಾಖಲಾತಿಗಳನ್ನು ಕಳವು ಮಾಡಲಾಗಿತ್ತು.
ಆರೋಪಿಗಳ ಬಳಿಯಿಂದ ಮಾದಾಪುರ ಪ್ರಕರಣಕ್ಕೆ ಸಂಬಂಧಿಸಿದಂತೆ 59 ಗ್ರಾಂ 790 ಮಿಲಿ ಚಿನ್ನಾಭರಣ ಮತ್ತು ರೂ. 5990 ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್, ಪಿಐ ಉಮೇಶ್.ಯು, ಪಿಎಸ್‌ಐ ರಮೇಶ ಕರಕಿಕಟ್ಟಿ, ಗ್ರಾಮಾಂತರ ಪೊಲೀಸ್ ಠಾಣೆ ಉಪವಿಭಾಗ ಮಟ್ಟದ ಅಪರಾಧ ತನಿಖಾ ಸಿಬ್ಬಂದಿಗಳು, ಶ್ವಾನದಳ ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ತನಿಖೆ ಕೈಗೊಂಡು ಕಾರ್ಯಾಚರಣೆ ನಡೆಸಿತು.
ಆರೋಪಿಗಳು ಮಂಗಳೂರು, ಹಾಸನ, ಮದ್ದೂರು, ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಕಳವು ಮಾಡಿರುವ ವಿಚಾರ ತನಿಖೆ ಸಂದರ್ಭ ತಿಳಿದು ಬಂದಿದೆ.
ಆರೋಪಿಗಳನ್ನು ಬಂಧಿಸುವಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತೋರಿದ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.