ಮಡಿಕೇರಿ ಫೆ.18 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಡಿಕೇರಿ ಹೋಬಳಿಯ ಮೂರ್ನಾಡು ಘಟಕದÀ ಅಧ್ಯಕ್ಷರನ್ನಾಗಿ ಸಾಹಿತಿ ಈರಮಂಡ ಹರಿಣಿ ವಿಜಯ್ ಹಾಗೂ ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಹೋಬಳಿಯ ಅಧ್ಯಕ್ಷರನ್ನಾಗಿ ಸಾಹಿತಿ ಉಳುವಂಗಡ ಕಾವೇರಿ ಉದಯ ಅವರನ್ನು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್ ಅವರು ನೇಮಕ ಮಾಡಿದ್ದಾರೆ ಎಂದು ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










