ಬೆಂಗಳೂರು ಫೆ.19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಟಾಟಾ ಸಮೂಹ ಸಂಸ್ಥೆಯ ಏರ್ ಇಂಡಿಯಾ ಹಾಗೂ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ರಾಜ್ಯದಲ್ಲಿ ಒಟ್ಟು 2300 ಕೋಟಿ ರೂಪಾಯಿ ಹೂಡಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆಗೆ ಸಹಿ ಮಾಡಿದರು.
ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಟಾಟಾ ಸಮೂಹದ ನಿಪುಣ್ ಅಗರ್ ವಾಲ್ , ಸುಕರಣ್ ಸಿಂಗ್, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿ., ಸಿಇಒ ಹರಿ ಮರಾರ್ ಉಪಸ್ಥಿತರಿದ್ದರು.