ಸಿದ್ದಾಪುರ ಫೆ.19 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 2024-25 ನೇ ಸಾಲಿನ ಬಜೆಟ್ ನಲ್ಲಿ ಎಲ್ಲಾ ವರ್ಗದ ಜನರನ್ನು ಗೌರವದಿಂದ ಕಾಣುವ ಮೂಲಕ ಅಭಿವೃದ್ಧಿಪರ ಚಿಂತನೆಯನ್ನು ಹರಿಸಿದೆ ಎಂದು ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎಂ.ಮುಸ್ತಫ ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಜನಪರ ಬಜೆಟ್ ಮಂಡನೆ ಮಾಡಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರೀತಿಯಲ್ಲಿಯೇ ನುಡಿದಂತೆ ನಡೆದುಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿನಂದನೆಗೆ ಅರ್ಹವಾಗಿದೆ ಎಂದು ತಿಳಿಸಿದ್ದಾರೆ.










