Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ : ಸಚಿವ ಎಂ.ಬಿ.ಪಾಟೀಲ
ಇತ್ತೀಚಿನ ಸುದ್ದಿಗಳು ಕರ್ನಾಟಕ

ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ : ಸಚಿವ ಎಂ.ಬಿ.ಪಾಟೀಲ

ಫೆಬ್ರವರಿ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಫೆ.19 NEWS DESK :  ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಸಮ್ಮುಖದಲ್ಲಿ  ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

ಬಳಿಕ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ವಿಧಾನಸೌಧದಲ್ಲಿ ನಡೆದ ಒಡಂಬಡಿಕೆ ವಿನಿಮಯದ ನಂತರ ಮಾತನಾಡಿದ ಸಚಿವ ಪಾಟೀಲ, `ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಇಡೀ ಭಾರತದಲ್ಲಿ ಇದು ಇಂತಹ ಮೊಟ್ಟಮೊದಲ ಯೋಜನೆಯಾಗಿದೆ’ ಎಂದರು.

ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕಂಪನಿಯು ಮೂರು ಯೋಜನೆಗಳಿಗೆ 1,030 ಕೋಟಿ ರೂ. ಬಂಡವಾಳ ಹೂಡಲಿದೆ. ಇವುಗಳ ಪೈಕಿ 420 ಕೋಟಿ ರೂ.ಗಳನ್ನು ಅದು ನಾಗರಿಕ ವಿಮಾನಗಳನ್ನು ಸರಕು ಸಾಗಣೆ ವಿಮಾನಗಳನ್ನಾಗಿ (ಫ್ರೈಟರ್) ಪರಿವರ್ತಿಸುವ ಘಟಕ ಸ್ಥಾಪನೆಗೆ ವಿನಿಯೋಗಿಸಲಿದೆ. ಜೊತೆಗೆ 310 ಕೋಟಿ ರೂ. ಹೂಡಿಕೆಯೊಂದಿಗೆ ಗನ್ ತಯಾರಿಕೆ ಘಟಕ ಮತ್ತು 300 ಕೋಟಿ ರೂ. ವೆಚ್ಚದಲ್ಲಿ ವಿಮಾನಯಾನ ಮತ್ತು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಿದೆ. ಇದರಿಂದ 450 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿವರಿಸಿದರು.

ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಮತ್ತು ಕೋಲಾರದಲ್ಲಿ ಟಿಎಎಸ್ಎಲ್ ತಾನು ಸ್ಥಾಪಿಸಲಿರುವ ಗನ್ ತಯಾರಿಕೆ ಘಟಕದ ಮೂಲಕ ತನಗೆ ಅಗತ್ಯವಿರುವ 13 ಸಾವಿರ ಬಿಡಿಭಾಗಗಳ ಪೈಕಿ ಶೇಕಡ 50ರಷ್ಟನ್ನು ಪೂರೈಸಿಕೊಳ್ಳುವ ಆಲೋಚನೆ ಹೊಂದಿದೆ. ಇದರಿಂದಾಗಿ 300ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 2-3 ಸಾವಿರ ಜನರಿಗೆ ಉದ್ಯೋಗಗಳು ಸಿಗಲಿವೆ. 1939ರಷ್ಟು ಹಿಂದೆಯೇ ಬೆಂಗಳೂರಿನಲ್ಲಿ ಎಚ್ಎಎಲ್ ಸ್ಥಾಪನೆಯಾಗುವುದರೊಂದಿಗೆ ರಾಜ್ಯವು ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದು  ಹೇಳಿದರು.

ರಕ್ಷಣಾ ಇಲಾಖೆಗೆ ಬೇಕಾಗುವ ವಿಮಾನಗಳು ಮತ್ತು ಹೆಲಿಕಾಪ್ಟರುಗಳ ಪೈಕಿ ಶೇಕಡ 67ರಷ್ಟು ಕರ್ನಾಟಕದಲ್ಲೇ ತಯಾರಾಗುತ್ತಿದೆ. ಜತೆಗೆ ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ರಫ್ತು ವಹಿವಾಟಿಗೆ ರಾಜ್ಯವು ಶೇಕಡ 65ರಷ್ಟು ಕೊಡುಗೆ ನೀಡುತ್ತಿದೆ. ದೇಶದಲ್ಲಿ ಈ ವಲಯದಲ್ಲಿರುವ ಕಂಪನಿಗಳ ಪೈಕಿ ಶೇ.70ರಷ್ಟು ಕಂಪನಿಗಳು ಕರ್ನಾಟಕದಲ್ಲೇ ನೆಲೆ ಹೊಂದಿವೆ.

ಕಾರ್ಯಕ್ರಮದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಏರ್ ಇಂಡಿಯಾದ ಉನ್ನತಾಧಿಕಾರಿಗಳಾದ ಮನನ್ ಚೌಹಾಣ್, ಕಾರ್ತಿಕೇಯ ಭಟ್, ಅತುಲ್ ಶುಕ್ಲ, ಟಿಎಎಸ್ಎಲ್ ಉನ್ನತಾಧಿಕಾರಿಗಳಾದ ಗುರು ದತ್ತಾತ್ರೇಯ, ಅರ್ಜುನ್ ಮೈನೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಹರಿ ಮಾರಾರ್, ಸಿಒಒ ಸಾತ್ಯಕಿ ರಘುನಾಥ್, ಸಿಎಫ್ಒ ಭಾಸ್ಕರ್ ರವೀಂದ್ರ ಮುಂತಾದವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.