ಮಡಿಕೇರಿ ಫೆ.19 : ಸಿದ್ದಾಪುರ ಅಮೃತ ಯುವ ಮೊಗೇರ ವತಿಯಿಂದ ಫೆ.24, 25 ಹಾಗೂ 26 ರಂದು ಅಮ್ಮತಿಯಲ್ಲಿ ದ್ವಿತೀಯ ವರ್ಷದ ಮೊಗೇರ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿ ನಡೆಯಲಿದೆ.
ಅಮ್ಮತಿಯ ಪ್ರೌಢಶಾಲೆ ಮೈದಾನದಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ಒಟ್ಟು ಹತ್ತು ಮಾಲೀಕತ್ವದ ಹತ್ತು ತಂಡಗಳು ಪಾಲ್ಗೊಳ್ಳಲಿದ್ದು ,ಟೀಮ್ ಹಂಟರ್ಸ್ ಮರಗೋಡು, ಫ್ರೆಂಡ್ಸ್ ಕ್ರಿಕೆಟರ್ಸ್ ಅಮ್ಮತಿ, SPM ರಾಯಲ್ ವಿರಾಜಪೇಟೆ, ಪ್ರೆಸಿಡೆಂಟ್ಸ್ XI ಸೋಮವಾರಪೇಟೆ, ಟೀಮ್ ಕಾರ್ಣಿಕ ಕೊಡಗು, ರಾಪ್ಟಾರ್ ಕಾನನಕಾಡು, ಟೀಮ್ ಬ್ರದರ್ಸ್ ಬಕ್ಕ, ಫ್ರೆಂಡ್ಸ್ ಘಿಟ ಅಮ್ಮತಿ, ಮರ್ಸಿಲೆಸ್ಸ್ ಕ್ರಿಕೆಟರ್ಸ್, ಕ್ಯಾಪ್ಟನ್ ಕ್ರಿಕೆಟರ್ಸ್ ಸುಂಟಿಕೊಪ್ಪ, ತಂಡಗಳ ನಡುವೆ ಲೀಗ್ ಪಂದ್ಯಗಳು ನಡೆಯಲಿವೆ.
ಪಂದ್ಯಾವಳಿಯ ವಿಜೇತ ತಂಡಕ್ಕೆ 50,000 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 25,000 ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೆಯೇ ವೈಯಕ್ತಿಕ, ಟ್ರೊಫಿಗಳು ಕೂಡ ಕ್ರೀಡಾಪಟುಗಳಿಗೆ ಸಿಗಲಿದೆ.
ಪಂದ್ಯಾವಳಿಯನ್ನು ಅಮೃತ ಯುವ ಮೊಗೇರ ಸೇವಾ ಸಮಾಜದ ಕ್ರೀಡಾ ಅಧ್ಯಕ್ಷ ಪಿ.ಸಿ.ರಮೇಶ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಅಮೃತ ಯುವ ಮೊಗೇರ ಸೇವಾ ಸಮಾಜದ ಅಧ್ಯಕ್ಷ ಪಿ.ಕೆ.ಮಂಜು, ಕೊಡಗು ಮೊಗೇರ ಜಿಲ್ಲಾಧ್ಯಕ್ಷ ಜನಾರ್ಧನ್, ತುಳು ಸಾಹಿತ್ಯ ಅಕಾಡಮಿಯ ಸದಸ್ಯ ಪಿ.ಎಂ.ರವಿ, ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಜಿಲ್ಲಾ ಕ್ರೀಡಾ ಅಧ್ಯಕ್ಷ ಎಂ.ಜಿ.ಚಂದ್ರ ಹಾಗೂ ಸಮಾಜದ ಗೌರವ ಅಧ್ಯಕ್ಷ ಅಕ್ಕಮ್ಮ ಮೂರ್ತಿ ಪಾಲ್ಗೊಳ್ಳಲಿದ್ದಾರೆ.
ಕ್ರೀಡಾ ಕೂಟದ ಪ್ರಮುಖವಾಗಿ ಆಯೋಜಕರು ಹಾಗೂ ಕೊಡಗು ಪತ್ರಕರ್ತರ ನಡುವೆ ಪ್ರದರ್ಶನ ಪಂದ್ಯಾವಳಿ ನಡೆಯಲಿದೆ ಎಂದು ಆಯೋಜಕರಾಗಿರುವ, ಪಿ.ಎನ್.ರಾಮು, ವಿಶ್ವ, ಮಣಿ, ರಘು, ಕೃಷ್ಣ, ನಾರಾಯಣ, ಗಣೇಶ, ಜನರ್ಧನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











