ವಿರಾಜಪೇಟೆ ಫೆ.19 NEWS DESK : ತಾಲೂಕು ಆಡಳಿತ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆಯ ಸಹಯೋಗದೊಂದಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಅಕ್ಷರ ಸಂತೋಷ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.
ಸಂವಿಧಾನ ಜಾತದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.
ವಿದ್ಯಾರ್ಥಿಯ ಸಾಧನೆಗೆ ಕಾವೇರಿ ಶಾಲೆಯ ಅಧ್ಯಕ್ಷ ಬಿ.ಎಸ್.ಸುದೇಶ್, ಕಾರ್ಯದರ್ಶಿ ಪಿ.ಎನ್.ವಿನೋದ್, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಾಥಮಿಕ ವಿಭಾಗದ ಸಂಯೋಜಕಿ ಬಿ.ಡಿ.ಭಾಗ್ಯ ಹಾಜರಿದ್ದರು.




































