ಮಡಿಕೇರಿ ಫೆ.19 NEWS DESK : ರಾಮನಗರದಲ್ಲಿ ವಕೀಲರ ವಿರುದ್ಧ ಪೊಲೀಸರು ವಿನಾಕಾರಣ ಮೊಕದ್ದಮೆ ದಾಖಲಿಸಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಮಡಿಕೇರಿ ವಕೀಲರ ಸಂಘ ತಿಳಿಸಿದೆ.
ಕ್ಷುಲ್ಲಕ ವಿಚಾರಕ್ಕೆ ನಡೆದ ಘಟನೆಗೆ ಸಂಬಂಧಿಸಿದಂತೆ 40 ವಕೀಲರ ಮೇಲೆ ರಾಮನಗರ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಪೊಲೀಸರ ಈ ಕ್ರಮವನ್ನು ರಾಜ್ಯವ್ಯಾಪಿ ವಕೀಲರು ಖಂಡಿಸಿದ್ದಾರೆ. ರಾಮನಗರ ನ್ಯಾಯಾಲಯದ ಕಲಾಪಗಳನ್ನು ಅಲ್ಲಿನ ವಕೀಲರು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ರಾಮನಗರದ ವಕೀಲ ಸಮುದಾಯಕ್ಕೆ ಬೆಂಬಲ ವ್ಯಕ್ತಪಡಿಸಿ, ಪೊಲೀಸರ ನಿಲುವು ಖಂಡಿಸಿ ಮಡಿಕೇರಿ ವಕೀಲರ ಸಂಘ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿರುವ ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ಎಂ.ಪಿ.ನಾಗರಾಜ್, ವಕೀಲರ ವಿರುದ್ಧದ ಮೊಕದ್ದಮೆಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.










