ಮಡಿಕೇರಿ ಫೆ.20 NEWS DESK : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿರುವ “ಸಂವಿಧಾನ ಜಾಗೃತಿ ಜಾಥಾ ” ಅಭಿಯಾನದ ಅಂಗವಾಗಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಔಟಿಟiಟಿe ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಕುರಿತಂತೆ ಪ್ರಶ್ನಾವಳಿಯ ಸರಣಿಯ ಎರಡನೇ ಹಂತದ ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗಿದೆ.
ಆ ದಿಸೆಯಲ್ಲಿ ಸಂವಿಧಾನ ಜಾಗೃತಿ ಜಾಥ ಕುರಿತಾದ ಎರಡನೇ ಹಂತದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೇಲ್ಕಂಡ ಗೂಗಲ್ ಫಾರ್ಮ್ ನಲ್ಲಿ ಕೋರಿರುವ ಮಾಹಿತಿಯನ್ನು ಭರ್ತಿ ಮಾಡಿ ನೀಡಲಾಗಿರುವ ಬಹು ಆಯ್ಕೆ ಮಾದರಿಯ ಪ್ರಶ್ನಾವಳಿಗಳಿಗೆ ಉತ್ತರಿಸುವ ಮೂಲಕ ಕೊಡಗು ಜಿಲ್ಲಾ ಆಡಳಿತ ವತಿಯಿಂದ ಆಯೋಜಿಸಲಾಗಿರುವ ವಿಶೇಷ ಅಭಿಯಾನ ಕಾರ್ಯಕ್ರಮ ದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ನೌಕರರು, ವಿಶೇಷವಾಗಿ ಶಾಲಾ ಶಿಕ್ಷಕರು, ವಿವಿಧ ಸಂಘ-ಸಂಸ್ಥೆಗಳು, ಭಾಗಿಯಾಗಿ ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಭಾಗವಹಿಸುವವರು :: https://docs.google.com/forms/d/e/1FAIpQLSfgt_NhUOicIzuh3Z8Oo_8WIJnqMtDK8B9xRlFjT9nTHuJbJg/viewform?usp=sf_link