ಗೋಣಿಕೊಪ್ಪ ಫೆ.20 NEWS DESK : ಪತ್ರಕರ್ತನ ಸೋಗಿನಲ್ಲಿ ಮಹಿಳೆಯರನ್ನು ವಂಚಿಸುತ್ತಿದ್ದ ಆರೋಪದಡಿ ಡಿ.ನಾಗೇಶ್ ಎಂಬಾತನನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ.
ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯನಿರತ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಈತನ ವಿರುದ್ಧ ಗೋಣಿಕೊಪ್ಪ ಠಾಣೆಯಲ್ಲಿ ದೂರು ದಾಖಲಾಗಿತ್ತು.
ತಲೆ ಮರೆಸಿಕೊಂಡಿದ್ದ ಡಿ.ನಾಗೇಶ್ ನನ್ನು 20 ದಿನಗಳ ನಂತರ ಮೈಸೂರಿನಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದ್ವಿಚಕ್ರ ವಾಹನ ಮತ್ತು ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು ವಿವಿಧ ಪ್ರಕರಣಗಳಡಿ ತನಿಖೆಯನ್ನು ಕೈಗೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ತಾಲ್ಲೂಕು ಉಪ ಪೊಲೀಸ್ ಅಧೀಕ್ಷಕ ಮೋಹನ್ ಕುಮಾರ್, ಗೋಣಿಕೊಪ್ಪ ಉಪನಿರೀಕ್ಷಕಿ ರೂಪಾದೇವಿ ಬಿರಾದಾರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.










