ಗೋಣಿಕೊಪ್ಪ ಫೆ.20 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ತೆರೇಸಾ ವಿಕ್ಟರ್, ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷರಾಗಿ ಆಯ್ಕೆಯಾದ ಕುಲ್ಲಚಂಡ ಪ್ರಮೋದ್ ಗಣಪತಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಂ.ಮಂಜುಳ ಅವರನ್ನು ಹಾತೂರು ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ಹಾತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕೊಕ್ಕಂಡ ರೋಶನ್ ಅವರ ಅಧ್ಯಕ್ಷತೆಯಲ್ಲಿ ಸಿಲ್ವರ್ ಸ್ಕೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ಹಾಗೂ ಕೊಕ್ಕಂಡ ಕಾವೇರಪ್ಪ ಅವರು ಮಾತನಾಡಿ ಪಕ್ಷ ನಿಷ್ಠೆಗೆ ಫಲ ಸಿಗುತ್ತದೆ ಎಂದರು.
ತಾಲ್ಲೂಕು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಲೀರ ಸಾದಲಿ, ಹಿರಿಯರಾದ ವಿ.ಟಿ.ವಾಸು, ದೊಡ್ಮನೆ ವಿಠಲ ಗೌಡ, ಗೋಣಿಕೊಪ್ಪ ಗ್ರಾ.ಪಂ ಸದಸ್ಯ ಚೆಪ್ಪುಡೀರ ಧ್ಯಾನ್ ಸುಬ್ಬಯ್ಯ, ಮಾಜಿ ಸದಸ್ಯ ರಾಜಶೇಖರ್, ಪ್ರಮುಖರಾದ ಶಿವಾಜಿ, ನೂರೇರ ಧನ್ಯ, ಬೇಬಿ, ಪುಲಿಯಂಡ ರೋಷನ್, ಶ್ರೇಯಸ್ಸ್, ಬೊಳ್ಳಿ, ಸುರೇಶ್, ಅಮ್ಜು, ಸುರೇಶ್, ಮಧುಸೂದನ್ ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.









