Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಫೆ.24 ರಿಂದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು

*ಫೆ.24 ರಿಂದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ*

February 20, 20243 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕೊಡಗು ಜಿಲ್ಲಾ ಶಾಖೆ, ಸೋಮವಾರಪೇಟೆ ತಾಲ್ಲೂಕು ಶಾಖೆಯ ಸಂಯುಕ್ತಾಶ್ರಯದಲ್ಲಿ ಫೆ.24 ಮತ್ತು 25 ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಿಗೆ ಸರ್ಕಾರಿ ಕ್ರೀಡಾ ಶಾಲಾ ಮೈದಾನದಲ್ಲಿ ಫೆ.24 ರಂದು ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ದೊರೆಯಲಿದ್ದು, ಆಸಕ್ತ ಸರ್ಕಾರಿ ಖಾಯಂ ನೌಕರರು ಫೆ.22 ರೊಳಗೆ https://forms.gle/3arj7sBogh2kieAKA ಲಿಂಕ್ ಬಳಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.
ಫೆ.24 ರಂದು ಬೆಳಗ್ಗೆ 10.30 ಗಂಟೆಗೆ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನಸಭಾ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಸಿ.ಭಾಸ್ಕರ್ ನಾಯ್ಕ್, ಕೂಡಿಗೆ ಗ್ರಾ.ಪಂ ಅಧ್ಯಕ್ಷ ಕೆ.ಟಿ.ಗಿರೀಶ್ ಹಾಗೂ ಸರ್ವ ಸದಸ್ಯರು ಮತ್ತು ಕೊಡಗು ಜಿ.ಪಂ ಆಡಳಿತಾಧಿಕಾರಿ ಡಾ.ಎನ್.ವಿ.ಪ್ರಸಾದ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ, ಸೋಮವಾರಪೇಟೆ ತಹಶೀಲ್ದಾರ್ ವಿ.ಎಸ್.ನವೀನ್ ಕುಮಾರ್ ಭಾಗವಹಿಸಲಿದ್ದಾರೆ.
45 ವರ್ಷ ಒಳಪಟ್ಟ ಹಾಗೂ 45 ವರ್ಷ ಮೇಲ್ಪಟ್ಟ ಪುರುಷ ವಿಭಾಗಕ್ಕೆ ವಾಲಿಬಾಲ್, ಫುಟ್ಬಾಲ್, ಹಾಕಿ, ಕಬ್ಬಡಿ, ಕ್ರಿಕೆಟ್, ಚೆಸ್, ಟೇಬಲ್ ಟೆನ್ನಿಸ್, ಕೇರಂ, ಥ್ರೋಬಾಲ್, ಟಿನಿಕಾಯ್ಟ, ಖೋ ಖೋ, ಯೋಗ ಹಾಗೂ ವಿವಿಧ ತೂಕದ ಅನುಸಾರ ವೈಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್, ದೇಹಧಾಡ್ರ್ಯ ಸ್ಪರ್ಧೆ ನಡೆಯಲಿದೆ. 35 ವಯೋಮಾನದೊಳಗಿನ ಮಹಿಳೆಯರಿಗೆ ವಿವಿಧ ಹಂತದ ಓಟ, ಉದ್ದಜಿಗಿತ, ಎತ್ತರ ಜಿಗಿತ ಸೇರಿದಂತೆ ವಿವಿಧ ಕ್ರೀಡಾಕೂಟ ನಡೆಯಲಿದೆ.
45 ವರ್ಷ ಒಳಪಟ್ಟ ಹಾಗೂ 45 ವರ್ಷ ಮೇಲ್ಪಟ್ಟ ಪುರುಷರಿಗೆ ವಿವಿಧ ಹಂತದ ಓಟ, ಉದ್ದಜಿಗಿತ, ಎತ್ತರ ಜಿಗಿತ, ಭಾರದ ಗುಂಡು ಎಸೆತ, ಡಿಸ್ಕಸ್ ಥ್ರೋ, ಹ್ಯಾಮರ್ ಥ್ರೋ, ರಿಲೇ, ಜಾವ್ಲಿನ್ ಥ್ರೋ, 35 ರಿಂದ 45 ವಯೋಮಾನದ ಮಹಿಳೆಯರಿಗೆ ಓಟ, ಉದ್ದ ಹಾಗೂ ಎತ್ತರ ಜಿಗಿತ, ಗುಂಡು, ಡಿಸ್ಕಸ್ ಎಸೆತ, ಟೆನಿಕಾಯ್ಟ ಪಂದ್ಯ ನಡೆಯಲಿದೆ. ಇದೇ ರೀತಿ 40-50 ರ ಪುರುಷರ ವಿಭಾಗ, 35-40 ಮಹಿಳೆಯರ ವಿಭಾಗ, 50-60 ವರ್ಷ ಮೇಲ್ಪಟ್ಟ ಪುರುಷರ ವಿಭಾಗ, 45-60 ಮೇಲ್ಪಟ್ಟ ಮಹಿಳೆಯ ವಿಭಾಗದಲ್ಲಿ ಓಟ, ಲಾಂಗ್ ಜಂಪ್, ಭಾರದ ಗುಂಡು ಎಸೆತ ಇತ್ಯಾದಿ ಕ್ರೀಡೆ ನಡೆಯಲಿದೆ ಎಂದು ವಿವರಿಸಿದರು.
ಹಿಂದೂಸ್ಥಾನಿ ಸಂಗೀತ ಮೌಖಿಕ(ಕ್ಲಾಸಿಕಲ್), ಲಘು ಶಾಸ್ತ್ರೀಯ ಸಂಗೀತ, ವಿವಿಧ ನಾಟ್ಯ ಪ್ರಾಕರ, ಜಾನಪದ ಗೀತೆ, ಕರಕುಶಲ ವಸ್ತುಗಳ ಪ್ರದರ್ಶನ, ನಾಟಕ ಸೇರಿದಂತೆ ಕಥಕ್, ಮಣಿಪುರಿ, ಕೂಚುಪುಡಿ, ಕಥಕಳಿ, ಭರತನಾಟ್ಯ ನೃತ್ಯ ಸ್ಪರ್ಧೆ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧಿಗಳು ಖಾಯಂ ಸರ್ಕಾರಿ ನೌಕರರಾಗಿರಬೇಕು. ದೈಹಿಕ ಶಿಕ್ಷಕರು, ಕ್ರೀಡಾ ಇಲಾಖೆ ತರಬೇತುದಾರರು ಭಾಗವಹಿಸುವಂತಿಲ್ಲ. ಒಬ್ಬ ಸ್ಪರ್ಧಿ ಅಥ್ಲೆಟಿಕ್ಸ್‍ನ ಮೂರು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ 9480032712 ಸಂಪರ್ಕಿಸಬಹುದು ಎಂದು ತಿಳಿಸಿದರು.
ಫೆ.27ರಂದು ಮಹಾ ಸಮ್ಮೇಳನ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಫೆ.27ರಂದು ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರ ಸಭಾಂಗಣದಲ್ಲಿ ಮಹಾ ಸಮ್ಮೇಳನ ನಡೆಯಲಿದೆ.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ ಮರು ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ, ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು. ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಸಿ.ಅರುಣ್ ಕುಮಾರ್, ಗೌರವಾಧ್ಯಕ್ಷ ಎಸ್.ಟಿ.ಶಮ್ಮಿ, ಹಿರಿಯ ಉಪಾಧ್ಯಕ್ಷ ಪಿ.ಎಂ.ಬಾಬು, ಖಜಾಂಚಿ ಪಿ.ಡಿ.ರಾಜೇಶ್, ರಾಜ್ಯ ಪರಿಷತ್ ಸದಸ್ಯ ವಿ.ಎಸ್.ಸುಗುಣಾನಂದ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಹಾಕಿ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಸನ್ಮಾನ*
Next Article *ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.