ಮಡಿಕೇರಿ ಫೆ.20 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*