ಮಡಿಕೇರಿ ಫೆ.20 NEWS DESK : ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಅನವಶ್ಯಕವಾಗಿ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಡಿಕೇರಿ ವಕೀಲರ ಸಂಘ ಇಂದು ನ್ಯಾಯಾಲಯ ಕಲಾಪ ಬಹಿಷ್ಕರಿಸಿತು.
ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ 32 ವಕೀಲರ ವಿರುದ್ಧ ಪೊಲೀಸರು ಮೊಕದ್ದಮೆ ದಾಖಲಿಸಿರುವುದು ಖಂಡನೀಯವೆಂದು ಸಂಘದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ವಕೀಲರ ಸಂಘಟನೆಗಳಿಂದ ನಡೆಯವ ವಿಧಾನಸೌಧ ಚಲೋ ಸಂದರ್ಭ ಮಡಿಕೇರಿ ವಕೀಲರ ಸಂಘದಿಂದ ಕೂಡ ಸದಸ್ಯರು ತೆರಳಿದ್ದಾರೆ ಎಂದು ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ನಾಗರಾಜ್ ಮಾಹಿತಿ ನೀಡಿದರು. ವಕೀಲರ ವಿರುದ್ಧದ ಮೊಕದ್ದಮೆಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ಸಂಘದ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು.









