ಕುಶಾಲನಗರ, ಫೆ 20 NEWS DESK : ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಹೆಬ್ಬಾಲೆ ಕ್ಲಸ್ಟರ್ ವತಿಯಿಂದ
ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಹಯೋಗದೊಂದಿಗೆ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ
ನಡೆದ ಸರಳ ಸಮಾರೋಪ ಸಮಾರಂಭದಲ್ಲಿ ಶಿಕ್ಷಕ ಸೇವೆಯಿಂದ ನಿವೃತ್ತಗೊಂಡ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು.
ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಅಭಿನಂದನಾ ಪತ್ರ ನೀಡಿ ಮಾತನಾಡಿದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ , ನಿವೃತ್ತ
ಶಿಕ್ಷಕರು ಸೇವೆಯಿಂದಷ್ಟೇ ನಿವೃತ್ತಿಗೊಂಡಿದ್ದರೂ ಅವರು ನಿವೃತ್ತಿ ನಂತರವೂ ಪ್ರವೃತ್ತಿಯಲ್ಲಿ ಶಿಕ್ಷಕರಾಗಿಯೇ ಇದ್ದು, ತಮ್ಮನ್ನು ಶಿಕ್ಷಣ ಕ್ಷೇತ್ರ ಹಾಗೂ ಸಮಾಜದ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ತಮ್ಮ ಆರೋಗ್ಯ ರಕ್ಷಣೆ ಕಡೆ ಹೆಚ್ಚಿನ ಗಮನಹರಿಸಬೇಕು ಎಂದರು.
ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಗೊಂಡ ಸಹ ಶಿಕ್ಷಕ ಹೆಚ್.ಈ. ರಮೇಶ್ ಹಾಗೂ ಶಿರಂಗಾಲ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡ ವಿಜಯ್ ಅವರನ್ನು ಕ್ಲಸ್ಟರ್ ಕೇಂದ್ರ ಹಾಗೂ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಸೇರಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.
ಹೆಬ್ಬಾಲೆ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಹೆಚ್ ಎಂ ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಏಳನೇ ಹೊಸಕೋಟೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಯ್ಯ. ತೊರೆನೂರು ಪ್ರೌಢಶಾಲಾ ಮುಖ್ಯ ಶಿಕ್ಷಕ ಬಿ.ಆರ್. ಸತ್ಯನಾರಾಯಣ. ಹೆಬ್ಬಾಲೆ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಸವರಾಜಶೆಟ್ಟಿ, ಶಿರಂಗಾಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಆರ್.ಡಿ. ಲೋಕೇಶ್.
ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್, ಕನ್ನಡ ಭಾಷಾ ಶಿಕ್ಷಕ ಮೆ.ನಾ. ವೆಂಕಟನಾಯಕ್, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಹಾಜರಿದ್ದರು.
ಸಿ.ಆರ್.ಪಿ. ಆದರ್ಶ್, ಹಳೆಕೋಟೆ ಶಾಲೆಯ ಮುಖ್ಯ ಶಿಕ್ಷಕ ಟಿ.ಆರ್. ರಮೇಶ್ , ನಲ್ಲೂರು ಶಾಲೆಯ ಮುಖ್ಯ ಶಿಕ್ಷಕ ಟಿ.ಸಿ. ಚಂದ್ರಶೇಖರ್ ಇದ್ದರು. ಶಿಕ್ಷಕಿಯರಾದ ಪುಷ್ಪಾವತಿ, ಜಾನಕಿ ರಮ್ಯಾ ಮತ್ತು ಭಾಗ್ಯ ತಂಡದವರು ಪ್ರಾರ್ಥಿಸಿದರು, ಶಿಕ್ಷಕಿ ಬಬಿತಾ ವಂದಿಸಿದರು.