ಮಡಿಕೇರಿ ಫೆ.21 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಮತ್ತು ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣಾ ಸಮಾರಂಭವು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಫೆ.22 ರಂದು ಬೆಳಗ್ಗೆ 11 ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಸ್ಕೌಟ್-ಗೈಡ್ ಭವನದಲ್ಲಿ ನಡೆಯಲಿದೆ.
ಅದೇ ದಿನ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಮಕ್ಕಳ ಜಾಗೃತಿ ಜಾಥ ಹೊರಡಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ ತಿಳಿಸಿದ್ದಾರೆ.









