ಮಡಿಕೇರಿ ಫೆ.22 NEWS DESK : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿರುವ “ಸಂವಿಧಾನ ಜಾಗೃತಿ ಜಾಥಾ” ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ Online ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಕುರಿತಂತೆ ಪ್ರಶ್ನಾವಳಿಯ ಸರಣಿಯ ಮೂರನೇ ಹಂತದ ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗಿದೆ.
ಈ ಸಂವಿಧಾನ ಜಾಗೃತಿ ಜಾಥ ಕುರಿತಾದ ಮೂರನೇ ಹಂತದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಫಾರ್ಮ್‍ನಲ್ಲಿ ಕೋರಿರುವ ಮಾಹಿತಿಯನ್ನು ಭರ್ತಿ ಮಾಡಿ ನೀಡಲಾಗಿರುವ ಬಹುಆಯ್ಕೆ ಮಾದರಿಯ ಪ್ರಶ್ನಾವಳಿಗಳಿಗೆ ಉತ್ತರಿಸುವ ಮೂಲಕ ಕೊಡಗು ಜಿಲ್ಲಾ ಆಡಳಿತ ವತಿಯಿಂದ ಆಯೋಜಿಸಲಾಗಿರುವ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ನೌಕರರು, ವಿಶೇಷವಾಗಿ ಶಾಲಾ ಶಿಕ್ಷಕರು, ವಿವಿಧ ಸಂಘ-ಸಂಸ್ಥೆಗಳು, ಭಾಗಿಯಾಗಲು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಕೋರಿದ್ದಾರೆ.
Link : https://docs.google.com/forms/d/e/1FAIpQLScvYfxL3dz6FBu54FaDKZIXE_aN_m_bqKaDFibqCSyKSBI8XQ/viewform?usp=sf_link








