ಮಡಿಕೇರಿ ಫೆ.22 NEWS DESK : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಒತ್ತಾಯಿಸಿ ಪೊನ್ನಂಪೇಟೆ ಅರಣ್ಯ
ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಪ್ರತಿಭಟನಾ ನಿರತ ಸ್ಥಳಕ್ಕೆ
ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದರು.
ಈ ಸಂದರ್ಭ ವಿದ್ಯಾರ್ಥಿಗಳು ಮಾತನಾಡಿ, ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವೀಧರರನ್ನೇ ನೇರ ನೇಮಕಾತಿ ಮಾಡುವುದರ ಮೂಲಕ (ಅರಣ್ಯಶಾಸ್ತ್ರ)ದಲ್ಲಿ ವಿಷೇಶ ಪರಿಣತಿ ಹೊಂದಿರುವ ಪದವೀಧರರ ಜ್ಞಾನ ಮತ್ತು ಅನುಭವವನ್ನು ರಚನಾತ್ಮಕವಾಗಿ ಬಳಸಿಕೊಳ್ಳಬೇಕೆಂದು ಒತ್ತಾಯಿಸಿದರು.
ಪದವೀಧರರನ್ನ ತಮ್ಮ ತಮ್ಮ ಇಲಾಖೆಗಳಲ್ಲಿನ ಹುದ್ದೆಗಳಗೆ ನೇಮಿಸುತ್ತಿವೆ. ಆದರೆ ಬಿ.ಎಸ್ಸಿ (ಅರಣ್ಯಶಾಸ್ತ್ರ) ಪದವೀಧರರನ್ನು ಅರಣ್ಯ ಇಲಾಖೆಯು ತನ್ನ ಹುದ್ದೆಗಳಿಗೆ ಶೇ.100ರಷ್ಟನ್ನು ಪರಿಗಣಿಸುತ್ತಿಲ್ಲ. ಆಙಖಈಔ ಹುದ್ದೆಗಳಿಗೆ ಹಾಲಿ ಇರುವ ನೇರ ನೇಮಕಾತಿಯನ್ನು ರದ್ದು ಗೊಳಿಸಿದರೆ ಬಿ.ಎಸ್ಸಿ (ಅರಣ್ಯಶಾಸ್ತ್ರ) ಮತ್ತು ಇತರೆ ವಿಜ್ಞಾನ ಪದವೀಧರರಿಗೆ ಅನ್ಯಾಯವಾಗುತ್ತದೆ ಎಂದರು.
ವಿದ್ಯಾರ್ಥಿಗಳ ಮನವಿಯನ್ನು ಸ್ವೀಕರಿಸಿ ಸ್ಪಂದಿಸಿದ ಸಂಸದರು, ಚುನಾವಣೆ ಮುಗಿದ ನಂತರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.
ನಾಲ್ಕು ವರ್ಷಗಳ ಕಾಲ ಅರಣ್ಯ ಶಾಸ್ತ್ರ ಪದವಿ ಪಡೆದ ವಿದ್ಯಾರ್ಥಿಗಳಿಗೆ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ತಕ್ಷಣವೇ ಮುಖ್ಯಮಂತ್ರಿಗಳು, ಅರಣ್ಯ ಸಚಿವರು ಹಾಗೂ ಜಿಲ್ಲೆಯ ಶಾಸಕರು ಕ್ರಮ ಕೈಗೊಳ್ಳುವಂತಾಗಬೇಕೆಂದು ಒತ್ತಾಯಿಸಿದರು.
ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿರಾಜಪೇಟೆ ಮಂಡಲ ಅಧ್ಯಕ್ಷ ಸುವೀನ್ ಗಣಪತಿ, ಪ್ರಧಾನ ಕಾರ್ಯದರ್ಶಿಗಳಾದ ಮಂಜು, ಗಣಪತಿ, ಪಕ್ಷದ ಮುಖಂಡರಾದ ಶ್ಯಾಮ್ ಚೋಡುಮಡ, ಮಾಚಿಮಡ ರವೀಂದ್ರ, ಕೊಡಗು ಬಿಜೆಪಿ ಸಂಚಾಲಕರಾದ ಸಚಿನ್, ಸಂಪತ್ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.








