ಮಡಿಕೇರಿ ಫೆ.22 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಮತ್ತು ಹಾಸನ ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘ ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ.ಮಹದೇವಪ್ಪ, ಹಾಸನದ ಉಸ್ತುವಾರಿ ಸಚಿವ ರಾಜಣ್ಣ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿದೆ.
ಸಕಲೇಶಪುರ ತಾಲ್ಲೂಕಿನ ಹೆಬ್ಸಲೆ ಗ್ರಾಮದ ಆದಿ ದ್ರಾವಿಡ (ತುಳು) ಸಮಾಜದ ಜನಾಂಗದವರಿಗೆ ವಿದ್ಯುತ್, ನೀರು, ಹಕ್ಕು ಪತ್ರ ಹಾಗೂ ಮೂಲಭೂತ ಸೌಕರ್ಯ ನೀಡಬೇಕು, ಕೊಡಗು ಸೇರಿದಂತೆ 4 ಜಿಲ್ಲೆಗಳಲ್ಲಿರುವ ಆದಿ ದ್ರಾವಿಡ ಸಮಾಜದ ಮಂದಿಗೆ ಸಮರ್ಪಕ ರೀತಿಯ ಜಾತಿ ಪ್ರಮಾಣಪತ್ರ ಮತ್ತು ಅನುದಾನ ಒದಗಿಸಬೇಕೆಂದು ಸಂಘದ ರಾಜಾಧ್ಯಕ್ಷ ಹೆಚ್.ಎಂ.ಸೋಮಪ್ಪ ಮನವಿ ಮಾಡಿದರು.
ಪ್ರಧಾನ ಕಾರ್ಯದರ್ಶಿ ಪಿ.ವಿ.ಜಯಪ್ರಕಾಶ್, ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಸಂಜೀವ ಪಾಂಡೇಶ್ವರ, ಪ್ರಧಾನ ಕಾರ್ಯದರ್ಶಿ ಆನಂದ ಅತ್ತಾವರ, ಖಜಾಂಚಿ ಈಶ್ವರ್, ಚೈತನ್ಯ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣ ಮತ್ತಿತರರು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.









