ಮಡಿಕೇರಿ ಫೆ.22 NEWS DESK : ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್, ಆಯಾತನ ರೆಸಾರ್ಟ್ ಹಾಗೂ ಬೆಟ್ಟದಹಳ್ಳಿ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ಮಲ್ಲಳ್ಳಿ ಜಲಪಾತದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
ಜಲಪಾತದ ಸುತ್ತಾಮುತ್ತಾ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಶುಚಿಗೊಳಿಸಲಾಯಿತು. ಸ್ವಚ್ಛತಾ ಆಂದೋಲನದಲ್ಲಿ ಸಂಗ್ರಹಿಸಿದ ಕಸವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವರಿ ಮಾಡಿದರು.
ನಂತರ ಮಾತನಾಡಿದ ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ.ರೋಹಿತ್, ಮುಂದಿನ ದಿನಗಳಲ್ಲಿ ಇದೇ ರೀತಿ ಸ್ವಚ್ಛತಾ ಆಂದೋಲನವನ್ನು ಪ್ರವಾಸಿ ಸ್ಥಳಗಳಲ್ಲಿ ನಡೆಸಲಾಗುವುದು ಮತ್ತು ಸೋಮವಾರಪೇಟೆ ತಾಲೂಕು ಪ್ರವಾಸಿಗರ ಸ್ಥಳಗಳನ್ನು ಅಭಿವೃದ್ಧಿಪಡಿಸಲು ನಿರಂತರವಾಗಿ ಶ್ರಮಿಸುವುದಾಗಿ ತಿಳಿಸಿದರು.
ಕಳೆದ ಬಾರಿ ಕೋವರ್ ಕೊಲ್ಲಿ ಜಂಕ್ಷನ್ ಬಳಿ ರೂ.25 ಸಾವಿರ ವೆಚ್ಚದ
ಪ್ರವಾಸಿಗ ಸೂಚನಾ ಫಲಕವನ್ನು ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ವತಿಯಿಂದ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಶ್ರಮದಾನದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ವಿಮಲಾಕ್ಷಿ, ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಎಸ್.ಎಲ್.ಅಭಿನಂದ್, ಖಜಾಂಚಿ ಪ್ರೀತಮ್, ಹಾಗೂ ಸದಸ್ಯರುಗಳು, ಆಯತನ ರೆಸಾರ್ಟ್ ಸಿಬ್ಬಂದಿ ವರ್ಗದವರು ಹಾಗೂ ಬೆಟ್ಟದಳ್ಳಿ ಗ್ರಾಮಸ್ಥರು ಪಾಲ್ಗೊಂಡಿದ್ದರು.








