Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ 474 ಶಾಲೆಯ 29,584 ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ 474 ಶಾಲೆಯ 29,584 ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಚಾಲನೆ*

ಫೆಬ್ರವರಿ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.22 NEWS DESK :  ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಶಿಕ್ಷಣ ಇಲಾಖೆ ಅಧಿಕಾರಿ ಸೌಮ್ಯ ಪೊನ್ನಪ್ಪ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ ಅವರು ಬಿಸಿ ಹಾಲಿನೊಂದಿಗೆ ಬೆರೆಸಿ ಕುಡಿಯಲು ‘ರಾಗಿ ಮಾಲ್ಟ್’ ವಿತರಿಸುವ ಕಾರ್ಯಕ್ರಮಕ್ಕೆ ‘ವಿದ್ಯಾರ್ಥಿಗಳಿಗೆ ರಾಗಿ ಮಾಲ್ಡ್’ ವಿತರಿಸುವ ಮೂಲಕ ಚಾಲನೆ ನೀಡಿದರು.
ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಿಸಿ ಮಾತನಾಡಿದ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ, ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಒಟ್ಟು 474 ಶಾಲೆಯ 29,584 ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಲಾಗುತ್ತದೆ ಎಂದು ಹೇಳಿದರು.
ಬೆಳಗ್ಗೆ ಕೆನೆ ಭರಿತ ಸಕ್ಕರೆ ಹಾಕಿದ ಹಾಲು, ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ಹಾಗೂ ಸಕ್ಕರೆ ಮಿಶ್ರಿತ ಹಾಲಿಗೆ ರಾಗಿ ಹೆಲ್ತ್ ಮಿಕ್ಸ್ ಒಳಗೊಂಡ ಮಾಲ್ಟ್‍ನ್ನು ವಿತರಿಸಲಾಗುತ್ತದೆ. ಜೊತೆಗೆ ಮಧ್ಯಾಹ್ನದ ಬಿಸಿಊಟ ನೀಡಲಾಗುತ್ತದೆ ಎಂದು ಹೇಳಿದರು.
2023 ರ ವರ್ಷವನ್ನು ಅಂತರ ರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಿರುವ ಹಿನ್ನೆಲೆ ಸರ್ಕಾರ ಶಾಲಾ ಮಕ್ಕಳಿಗೆ ಅಪೌಷ್ಠಿಕತೆ ನಿವಾರಿಸಲು, ಅನೀಮಿಯ ತಡೆಗಟ್ಟಲು ಉತ್ತಮ ಆರೋಗ್ಯಕರ ಬೆಳವಣಿಗೆಯೊಂದಿಗೆ ಶಾಲೆಯ ನಿರಂತರ ಕಲಿಕೆಯನ್ನು ಪ್ರೋತ್ಸಾಹಿಸಲು ಸರ್ಕಾರ ರಾಗಿ ಮಾಲ್ಟ್‍ನ್ನು ವಿತರಿಸಲು ಮುಂದಾಗಿದೆ ಎಂದು ಹೇಳಿದರು.
ಸಿರಿಧಾನ್ಯಗಳ ಆಹಾರದ ಬಳಕೆಯ ಉಪಯುಕ್ತತೆ ಮತ್ತು ಸಿರಿಧಾನ್ಯಗಳಲ್ಲಿ ದೊರೆಯುವ ಬಹು ಪೌಷ್ಠಿಕಾಂಶಗಳ ಕುರಿತು ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಲು, ಬೆಳಗ್ಗಿನ ಪ್ರಾರ್ಥನಾ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಕ್ಷೀರಭಾಗ್ಯ ಯೋಜನೆಯಡಿ ಬಿಸಿ ಹಾಲು ತಯಾರಿಸಿ ವಿತರಿಸುವ ಸಂದರ್ಭದಲ್ಲಿ ರಾಗಿ ಮಾಲ್ಟ್‍ನ್ನು ವಿತರಿಸಲಾಗುತ್ತದೆ ಎಂದು ಶಶಿಕಲಾ ಅವರು ವಿವರಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಅನ್ನಪೂರ್ಣ ಸಂಸ್ಥೆಯವರು ಬಹುಪೌಷ್ಠಿಕಾಂಶವುಳ್ಳ, ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಮಿಶ್ರಣವನ್ನು ಉಚಿತವಾಗಿ ನೀಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಮಾತನಾಡಿ ಹಿಂದೆ ಮನೆಗಳಲ್ಲಿ ಸಿರಿಧಾನ್ಯಗಳನ್ನು ಹೆಚ್ಚು ಬಳಸಲಾಗುತ್ತಿತ್ತು, ಹುರುಳಿ, ಅವರೆ, ತೊಗರಿ, ಅವಸಂದೆ ಇಂತಹ ಕಾಳುಗಳ ಆಹಾರವನ್ನು ಉಪಯೋಗಿಸುತ್ತಿದ್ದರು. ಇತ್ತೀಚೆಗೆ ಬಳಕೆ ಕಡಿಮೆಯಾಗುತ್ತಿದೆ. ಮಕ್ಕಳಲ್ಲಿ ಅಪೌಷ್ಠಿಕತೆ ಹೋಗಲಾಡಿಸಲು ರಾಗಿ ಮಾಲ್ಟ್‍ನ್ನು ವಿತರಿಸಲಾಗುತ್ತಿದೆ ಎಂದರು.
ಶಿಕ್ಷಣ ಇಲಾಖೆ ಅಧಿಕಾರಿ ಸೌಮ್ಯ ಪೊನ್ನಪ್ಪ ಅವರು ಮಾತನಾಡಿ ಸರ್ಕಾರ ಬಿಸಿಯೂಟ, ಬಿಸಿಹಾಲು, ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆ ನಿಟ್ಟಿನಲ್ಲಿ ಇವುಗಳನ್ನು ಸರಿಯಾಗಿ ಬಳಸಿಕೊಂಡು ಓದಿನ ಕಡೆಗೆ ಗಮನಹರಿಸಬೇಕು ಎಂದು ಹೇಳಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಚ್.ಕೆ.ಸುಶೀಲ ಅವರು ಮಾತನಾಡಿ ಪೂರ್ವ ಪ್ರಾಥಮಿಕ (ಎಲ್‍ಕೆಜಿ) ಇಂಗ್ಲೀಷ್ ಮತ್ತು ಕನ್ನಡ ಮಾಧ್ಯಮದಲ್ಲಿ ಆರಂಭವಾಗಿದೆ. ಹಾಗೆಯೇ ಒಂದನೇ ತರಗತಿಯಿಂದ ಇಂಗ್ಲೀಷ್ ಮಾಧ್ಯಮ ಆರಂಭವಾಗಿದ್ದು, ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ನಗರದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳ ಅವರು ಮಾಹಿತಿ ನೀಡಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಗಳು ಹಾಕಿ(ಪ್ರೀತಮ್), ಪುಟ್ಬಾಲ್(ಕಾವ್ಯ), ಅಥ್ಲೆಟಿಕ್(ಮೇಘನ್), ಗವಿನ್, ಬಾಲಜಿ, ಪೂರ್ವಿತ ಗ್ವಾಲಿಯಾರ್, ರಾಂಚಿ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದು ಹೇಳಿದರು. ಆ ನಿಟ್ಟಿನಲ್ಲಿ ಕರಾಟೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಕೋರಿದರು.
ನಗರದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಗುರುರಾಜ್ ಅವರು ಮಾತನಾಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಹೇಮಂತ್ ಕುಮಾರ್, ಎಸ್‍ಡಿಎಂಸಿ ಉಪಾಧ್ಯಕ್ಷರಾದ ರೇಷ್ಮ ತೇಜ, ಜಗದೀಶ್ ಶಿಕ್ಷಕಿಯವರು, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.