ಮಡಿಕೇರಿ ಫೆ.23 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಇಂಡಿಜೀನಿಯಸ್ ಟೆಕ್ನಾಲಜೀಸ್ ಫಾರ್ ಸೊಸೈಟಲ್ ಡೆವಲಪ್‍ಮೆಂಟ್ ಎಂಬ ವಿಷಯ ಕುರಿತು 2024 ರ ಫೆಬ್ರವರಿ, 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅಕಾಡೆಮಿ ಕಚೇರಿಯಲ್ಲಿ (ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಮೇ, ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097) ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದು. ಡ್ರಾಯಿಂಗ್ ಮತ್ತು ಪೆಯಿಟಿಂಗ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಗೂಗಲ್ ಫಾರ್ಮ್ https://forms.gie/e5UbmGWkkaC1utgLA ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‍ಸೈಟ್ http://www.kstacademy.in ನ್ನು ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.









