ಮಡಿಕೇರಿ ಫೆ.23 NEWS DESK : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ಪಡೆದುಕೊಳ್ಳಲು ಈ ಕಚೇರಿಯಲ್ಲಿ ಲಭ್ಯವಿರುವ ನಿಗಧಿತ ನಮೂನೆಯ ಅರ್ಜಿ ಪಡೆದು ಫೆ.29 ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ https://kmvstdcl.karnataka.gov.in ಮೂಲಕ ಪಡೆದುಕೊಳ್ಳುವುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಹೊಸ ಬಡಾವಣೆ, ರೇಸ್‍ಕೋರ್ಸ್ ರಸ್ತೆ, ಕೊಡಗು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.










