ಮಡಿಕೇರಿ ಫೆ.23 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭಾಷಣ ಸ್ಪರ್ಧೆ ಮತ್ತು 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ಕನ್ನಡ ಭಾಷೆ ಪರೀಕ್ಷೆಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಫೆ.25 ರಂದು ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಪತ್ರಿಕಾ ಭವನ ಟ್ರಸ್ಟ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎಸ್.ಐ.ಮುನಿರ್ ಅಹ್ಮದ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ್ ಅಮೆಚೂರು ವಹಿಸಲಿದ್ದಾರೆ.
ಅತಿಥಿಗಳಾಗಿ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಉಪಾಧ್ಯಕ್ಷರಾದ ಎಂ.ಇ.ಮೊಹಿದ್ದೀನ್, ರೇವತಿ ರಮೇಶ್ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಪ್ರಶಸ್ತಿ ಪ್ರದಾನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಗೌರವ ಉಪಸ್ಥಿತರಿರಲಿದ್ದಾರೆ. ಸಾಹಿತಿ ಮತ್ತು ಪತ್ರಕರ್ತ ಡಾ.ಜೆ.ಸೋಮಣ್ಣ ಮುಖ್ಯ ಭಾಷಣ ಮಾಡಲಿದ್ದಾರೆ.
ಐಗೂರು ಸರ್ಕಾರಿ ಪ್ರೌಢಶಾಲೆಯ ಸಿ.ಬಿ.ಬೇಸಿಲ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದು, ದತ್ತಿ ದಾನಿ ಟಿ.ಪಿ.ರಮೇಶ್ ಗೌರವಿಸಲಿದ್ದಾರೆ.
ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದ ಬಳಗದ ಪ್ರಧಾನ ಕಾರ್ಯದರ್ಶಿ ಭಾರತಿ ರಮೇಶ್, ಕೋಶಾಧಿಕಾರಿ ಕಡ್ಲೇರ ತುಳಸಿ ಮೋಹನ್, ಸಹ ಕಾರ್ಯದರ್ಶಿ ಜಯಪ್ಪ ಹಾನಗಲ್, ಕಸಾಪ ಗೌರವ ಕೋಶಾಧಿಕಾರಿ ಎಸ್.ಎಸ್.ಸಂಪತ್ತು ಕುಮಾರ್ ಬಹುಮಾನ ವಿತರಣೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕಲೆ ಮತ್ತು ಸಾಹಿತ್ಯ ಕುರಿತು ಸ್ಪರ್ಧೆ ನಡೆಯಲಿದೆ.









