ಮಡಿಕೇರಿ ಫೆ.23 NEWS DESK : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ.ಜಾ ಮತ್ತು ಪ.ಪಂ ನೌಕರರ ಸಂಘದ ವತಿಯಿಂದ ಫೆ.24 ರಂದು ಮಡಿಕೇರಿಯಲ್ಲಿ ಸಂವಿಧಾನ ಜಾಗೃತಿ ಸಮಾವೇಶ ನಡೆಯಲಿದೆ.
ನಗರದ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ಬಿ.ಜಯಶಂಕರ ಶೆಟ್ಟಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ನಂದಕುಮಾರ್ ವಹಿಸಲಿದ್ದಾರೆ.
ಬೆಂಗಳೂರು ಎಂ.ಇ.ಎಸ್.ಕಾಲೇಜಿನ ಉಪನ್ಯಾಸಕ ಡಾ.ರವಿ ಅಪ್ಪಗೆರೆ ಆಶಯ ನುಡಿಗಳನ್ನಾಡಲಿದ್ದು, ಮುಖ್ಯ ಭಾಷಣಕಾರರಾಗಿ ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗ ಕಾರ್ಮಿಕ ಕಲ್ಯಾಣಧಿಕಾರಿ ಕೆ.ಕೆ.ಸೋಮಶೇಖರ್, ಮಡಿಕೇರಿ ಘಟಕ ವ್ಯವಸ್ಥಾಪಕ ಹೆಚ್.ಇ.ವೀರಭದ್ರಸ್ವಾಮಿ, ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಂ.ಟಿ.ಸುರೇಶ್ ಕಂಠಿ ಭಾಗವಹಿಸಲಿದ್ದಾರೆ.









