Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಿಳಾ ಸಬಲೀಕರಣ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ : ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಿಳಾ ಸಬಲೀಕರಣ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ : ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*

ಫೆಬ್ರವರಿ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.23 NEWS DESK : ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಮಿಷನ್ ಶಕ್ತಿಯು ಮಹಿಳೆಯ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕಾಗಿ ಮಧ್ಯಸ್ಥಿಕೆ ಕ್ರಮಗಳನ್ನು ಬಲಪಡಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.
ಮಹಿಳಾ ಮುಂಚೂಣಿ ಅಭಿವೃದ್ಧಿಗಾಗಿ ಮಿಷನ್ ಶಕ್ತಿಯು ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರ ಸಬಲೀಕರಣ ಎಂಬ ಎರಡು ಉಪ ಯೋಜನೆಗಳನ್ನು ಹೊಂದಿದೆ ಎಂದು ನಟರಾಜು ಮಾಹಿತಿ ನೀಡಿದರು.
ಮಿಷನ್ ಶಕ್ತಿ ಸೇವೆಗಳಲ್ಲಿ ಪ್ರಮುಖವಾಗಿ ಹಿಂಸೆಯಿಂದ ಬಾಧಿತರಾದ ಮಹಿಳೆಯರಿಗೆ ಒನ್ ಸ್ಟಾಪ್ ಸೆಂಟ್ರಲ್‍ಗಳ ಮುಖಾಂತರ ತಾತ್ಕಾಲಿಕ ಆಶ್ರಯ ಕಾನೂನು ನೆರವು, ಮಾನಸಿಕ, ಸಾಮಾಜಿಕ, ಸಮಾಲೋಚನೆ, ವೈದ್ಯಕೀಯ ನೆರವು ಪೊಲೀಸ್ ಸೌಲಭ್ಯಗಳ ಮೂಲಕ ನಿರಂತರ ಸೌಲಭ್ಯ ಮತ್ತು ರಕ್ಷಣೆ ಒದಗಿಸಲಾಗುತ್ತದೆ ಎಂದು ಹೇಳಿದರು.
ಮಹಿಳೆಯರ ಸಾಮಾಜಿಕ, ಸಾಂಸ್ಕøತಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ಧಿ ಮತ್ತು ಸಬಲೀಕರಣ ಗುರಿಯನ್ನು ಹೊಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.
‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯನ್ನು ದೇಶದಲ್ಲಿ ಇಳಿಕೆಯಾಗುತ್ತಿರುವ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಸಬಲೀಕರಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯಕ್ರಮ ಆರಂಭಿಸಲಾಗಿದೆ ಎಂದರು.
ದೇಶದಲ್ಲಿ ಹೆಣ್ಣು ಮಗುವಿನ ವಿಷಯವಾಗಿ ಪ್ರಚಲಿತದಲ್ಲಿರುವ ಸಾಮಾಜಿಕ ನಡತೆಯನ್ನು ಬದಲಿಸುವುದಕ್ಕಾಗಿ ಮಾಹಿತಿ, ಪ್ರೇರಣೆ ಮತ್ತು ಭಾಗವಹಿಸುವಿಕೆಗಳ ಮೂಲಕ ಸಂಬಂಧಪಟ್ಟ ಎಲ್ಲಾ ಸಹಭಾಗಿಗಳನ್ನು ಸಶಕ್ತರನ್ನಾಗಿ ಮಾಡುವುದೇ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ನಟರಾಜು ವಿವರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಒಟ್ಟುಗೂಡಿ ಕಾರ್ಯನಿರ್ವಹಿಸಿದಾಗ ಮಹಿಳೆಯರ ಸುರಕ್ಷತೆ, ಮಕ್ಕಳ ರಕ್ಷಣೆ ಹಾಗೂ ಲಿಂಗಾನುಪಾತವನ್ನು ಸರಿದೂಗಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಮಾಜದಲ್ಲಿ ಇನ್ನೂ ಮುಖ್ಯವಾಹಿನಿಗೆ ಬರದವರನ್ನು ಗುರುತಿಸಿ ಸರ್ಕಾರದ ಸೌಲಭ್ಯವನ್ನು ತಲುಪಿಸಲು ಪ್ರಯತ್ನಿಸಬೇಕು. ಎಲ್ಲರನ್ನೂ ಒಳಗೊಂಡು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಉಮಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೃಷ್ಣಪ್ಪ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.