ಮಡಿಕೇರಿ ಫೆ.23 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆಬ್ರವರಿ, 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ.
ಉದ್ಯೋಗವನ್ನು ಬಯಸುವಂತಹ ಕೊಡಗು ಜಿಲ್ಲೆಯ ವಿಕಲಚೇತನರು ಉದ್ಯೋಗ ಮೇಳದಲ್ಲಿ https://udyoga.skillconnet.kaushalkar.com/ ಲಿಂಕ್ ನಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬೇಕೆಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಕೋರಿದ್ದಾರೆ.









