ಕುಶಾಲನಗರ ಫೆ.24 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಕುಶಾಲನಗರದ ಕೆ.ಎಸ್.ಮೂರ್ತಿ ನೇಮಕಗೊಂಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ವಚನ ಸಾಹಿತ್ಯ ವೇದಿಕೆಯನ್ನು ಕಟ್ಟುವ ಮೂಲಕ ” ವಚನಗಳ ನಡಿಗೆ – ಶಾಲಾ ಕಾಲೇಜುಗಳೆಡೆಗೆ ” ಎಂಬ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುವ ಮೂಲಕ ಶರಣ ಸಾಹಿತ್ಯ ಪರಿಷತ್ತಿನ ಆಶಯಕ್ಕನುಗುಣವಾಗಿ ಕೆ.ಎಸ್.ಮೂರ್ತಿ ಕಾರ್ಯನಿರ್ವಹಿಸುತ್ತಿರುವುದರಿಂದ ಪರಿಷತ್ತಿನ ಗೌರವಾಧ್ಯಕ್ಷರಾಗಿರುವ ಸುತ್ತೂರು ಶ್ರೀಗಳ ಸೂಚನೆಯಂತೆ ಇವರನ್ನು ನೇಮಕಗೊಳಿಸಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಮಿತಿಗಳನ್ನು ರಚಿಸುವ ಮೂಲಕ ಶರಣ ಸಾಹಿತ್ಯ ಪರಿಷತ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ಮಾಡುವ ಮೂಲಕ ಶರಣ ಸಾಹಿತ್ಯವನ್ನು ಮತ್ತಷ್ಟು ಚೈತನ್ಯಶೀಲ ಗೊಳಿಸಬೇಕೆಂದು ಅವರು ತಿಳಿಸಿದ್ದಾರೆ.









