ಬೆಂಗಳೂರು ಫೆ.24 NEWS DESK : ರಾಜ್ಯದಲ್ಲಿ ಅತ್ಯಂತ ಕುತೂಹಲ ಮೂಡಿಸಿರುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಲಿದ್ದು, ವಿಧಾನ ಸೌಧದಲ್ಲಿ ಸಿದ್ದವಾಗುತ್ತಿರುವ ಮತಗಟ್ಟೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವೀಕ್ಷಣೆ ಮಾಡಿದರು.
ಒಟ್ಟು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಐದನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಅಡ್ಡ ಮತದಾನವಾಗದೇ ಇರಲು ಕಾಂಗ್ರೆಸ್ ಮುಂಜಾಗ್ರತಾ ಕ್ರಮ ವಹಿಸಿದ್ದು, ಕಾನೂನಾತ್ಮಕವಾಗಿ ಚುನಾವಣೆ ನಡೆಸುವ ಸಲುವಾಗಿ ಕಾನೂನು ತಜ್ಞರು ಆಗಿರುವ ಎ.ಎಸ್.ಪೊನ್ನಣ್ಣ ನವರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ.