ಹುಣುಸೂರು ಫೆ.24 NEWS DESK : ಇತ್ತೀಚೆಗೆ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಹುಣಸೂರು ತಾಲ್ಲೂಕಿನ ರತ್ನಪುರಿ ಬಳಿಯ ದಾಸನಪುರದ ನಿವಾಸಿ ವಿದ್ಯಾರ್ಥಿ ಮುತ್ತುರಾಜ್ ಅವರ ಮನೆಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದರು. ಮುತ್ತುರಾಜ್ ಅವರ ತಂದೆ ರವಿಕುಮಾರ್ ಹಾಗೂ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಸಾಂತ್ವನ ಹೇಳಿದರು. ಸೂಕ್ತ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು.
ಕಾಲೇಜು ವಿದ್ಯಾರ್ಥಿ ಮುತ್ತುರಾಜ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿತ್ತು. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.