ಮಡಿಕೇರಿ ಫೆ.24 NEWS DESK : ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಮನ್ವಯತೆಯ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿತ್ತು. ಈ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸ್ಥಳದಲ್ಲಿಯೇ ಇತ್ಯರ್ಥ ಪಡಿಸಿದರು.
ಸರ್ವೆ ನಂ 74 ರಲ್ಲಿ ಭಾಗಮಂಡಲ ಗ್ರಾಮ ಪಂಚಾಯತಿ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿದ್ದು ಪಕ್ಕದ ಸರ್ವೆ ನಂ ಜಾಗ ದೇವರಕಾಡು ಅರಣ್ಯಕ್ಕೆ ಸೇರಿದ್ದಾಗಿರುತ್ತದೆ. ಸದರಿ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನೀರಿನ ಪಂಪ್, ಮೋಟಾರ್ ಹಾಗೂ ಪೈಪ್’ಗಳನ್ನು ವಶಪಡಿಸಿಕೊಂಡಿತ್ತು. ಜೊತೆಗೆ ಅರಣ್ಯ ಇಲಾಖೆಯ ಅನುಮತಿ ಪಡೆಯದೆ ರಸ್ತೆ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ರಸ್ತೆ ಮಾಡಿದ್ದಾರೆ ಎಂದು ಕೇಸ್ ದಾಖಲಿಸಿದ್ದರು.
ಇಂದು ಭಾಗಮಂಡಲದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲು ಎ.ಎಸ್.ಪೊನ್ನಣ್ಣ ಅವರು ಆಗಮಿಸಿದಾಗ ಭಾಗಮಂಡಲ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದ ನಿವಾಸಿಗಳು ಸಮಸ್ಯೆಯನ್ನು ಬಗೆ ಹರಿಸಲು ಶಾಸಕರಲ್ಲಿ ಕೋರಿಕೊಂಡರು.
ತಕ್ಷಣವೇ ಪೊನ್ನಣ್ಣ ಅವರು ಸ್ಥಳಕ್ಕೆ ಅರಣ್ಯ ಅಧಿಕಾರಿಗಳನ್ನು ಕರೆಸಿಕೊಂಡು ಪರಿಶೀಲನೆ ನಡೆಸಿದರು. ಅರಣ್ಯ ಇಲಾಖೆ ಗಡಿಯನ್ನು ಇನ್ನೂ ಕೂಡ ಗುರುತಿಸದೇ ಇರುವುದರಿಂದ ಹಾಗೂ ಕುಡಿಯುವ ನೀರು ಮೂಲಭೂತ ಹಕ್ಕು ಆಗಿರುವುದರಿಂದ ತಕ್ಷಣವೇ ಮೋಟಾರ್ ಪಂಪ್ ಗಳನ್ನು ಹಿಂತಿರುಗಿಸಿ ನೀರಿನ ವ್ಯವಸ್ಥೆಗೆ ಅಡ್ಡಿ ಪಡಿಸದಂತೆ ಸಂಭಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಕಾನೂನು ರೀತಿ ಅಡಚಣೆ ಬಂದರೆ ತಾವು ಇತ್ಯರ್ಥ ಪಡಿಸುವವುದಾಗಿ ಭರವಸೆ ನೀಡುವ ಮೂಲಕ ಗ್ರಾಮಸ್ಥರಿಗೆ ನೆರವಾಗಿದ್ದಾರೆ.
ದುರ್ಗಮ ಹಾದಿಯನ್ನು ಕ್ರಮಿಸಿ ಜನರ ಸಮಸ್ಯೆಗೆ ಸ್ಪಂದಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಿದ ಎ.ಎಸ್.ಪೊನ್ನಣ್ಣ ಅವರ ಕಾರ್ಯಕ್ಷಮತೆಗೆ ಭಾಗಮಂಡಲ ಸುತ್ತಮುತ್ತಲಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Breaking News
- *ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ*
- *ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ ಸಿದ್ದರಾಮಯ್ಯ ಕರೆ*
- *ಸುತ್ತೂರು ಮಠದ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ*
- *ಸುಂಟಿಕೊಪ್ಪ : ಸ್ವರ್ಣಾಲಯದಲ್ಲಿ ಗಾಂಧಿ ಸ್ಮರಣೆ*
- *ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಕೆ.ಎಸ್.ಮೂರ್ತಿ ಆಯ್ಕೆ*
- *ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಸಿ.ಎಂ.ಚಿಣ್ಣಪ್ಪ ಆಯ್ಕೆ*
- *ತೀರ್ಪುಗಾರರಾಗಿ ಕೊಡಗಿನ ಹರ್ಷಿತ್ ಅಯ್ಯಪ್ಪ ನೇಮಕ*
- *ಭಾಗಮಂಡಲ ಮೇಲ್ಸೇತುವೆಗೆ ಕೆದಂಬಾಡಿ ರಾಮಯ್ಯ ಗೌಡರ ಹೆಸರಿಡಲು ಮನವಿ*
- *ಹಿಂದು ಯುವ ಸಮೂಹದ ಜಾಗೃತಿಗಾಗಿ ಮಡಿಕೇರಿಯಲ್ಲಿ ಜಾಗೃತಿ ಬೈಕ್ ಜಾಥಾ*
- *ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ : ನೂತನ ರಾಜಗೋಪುರ ಉದ್ಘಾಟನೆ*