ನಾಪೋಕ್ಲು ಫೆ.27 NEWS DESK : ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಮಾಡುದುವು ಬೇಡ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಹೇಳಿದರು.
ಕೊಳಕೇರಿ ಗ್ರಾಮದಿಂದ ಕೋಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ 30ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ವಿರಾಜಪೇಟೆ ಕ್ಷೇತ್ರದಾದ್ಯಂತ ಅನುದಾನಕ್ಕೆ ಅನುಗುಣವಾಗಿ ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಅಭಿವೃದ್ಧಿ ಕಾರ್ಯವನ್ನು ಗ್ಯಾರೆಂಟಿಗೆ ಹೋಲಿಕೆ ಮಾಡುವುದು ಬೇಡ. ಕ್ಷೇತ್ರದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ಯಾರಾದರೂ ಅಡ್ಡಿಪಡಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತೀಕ್ಷ್ಮವಾಗಿ ಪ್ರತಿಕ್ರಿಯಿಸಿದರು. ಗುಣಮಟ್ಟ ಕಾಪಾಡಿಕೊಂಡು ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಗುತ್ತಿಗೆ ದಾರರಿಗೆ ಸೂಚಿಸಿದರು.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟ ಪರಿಶೀಲನೆ ಮಾಡಿ ಕಾಮಗಾರಿ ಕಳಪೆ ಆಗದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ, ನಾಪೋಕ್ಲು ವಲಯ ಅಧ್ಯಕ್ಷ , ಸದಸ್ಯರಾದ ಮಾಚೇಟಿರ ಕುಸು ಕುಶಾಲಪ್ಪ, ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಎಂ.ಎಂ.ಅಮೀನಾ,ಕೆ.ವೈ.ಅಶ್ರಫ್, ಗಂಗಮ್ಮ,ಸಾಬತಿಮ್ಮಯ್ಯ, ಮಾಜಿ ಸದಸ್ಯ ಎ.ಕೆ. ಹಾರಿಸ್, ಗ್ರಾಮಸ್ಥರಾದ ಮೊಯ್ದುಕುಟ್ಟಿ ಹಾಜಿ, ಅಹಮದ್ ಹಾಜಿ, ಎಂ.ಬಿ. ಇಸ್ಮಾಯಿಲ್, ಎಂ.ಯು. ಮುನೀರ್, ಕೆ. ಎ.ಆಲಿ, ಕಲಿಯಂಡ ಕೌಶಿ, ಕೆಲೇಟಿರ ದೀಪು ದೇವಯ್ಯ, ಅಪ್ಪಚಟ್ಟೋಳಂಡ ಮಿಥುನ್ ಮಾಚಯ್ಯ ಗುತ್ತಿಗೆದಾರರಾದ ಶಬೀಲ್, ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.