Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸುಂಟಿಕೊಪ್ಪ : ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ : ಜಗನ್ನಾಥ್*
ಇತ್ತೀಚಿನ ಸುದ್ದಿಗಳು

*ಸುಂಟಿಕೊಪ್ಪ : ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ : ಜಗನ್ನಾಥ್*

February 27, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸುಂಟಿಕೊಪ್ಪ, ಫೆ.27 NEWS DESK :  ಕ್ರೀಡಾಕೂಟ ಕೇವಲ ಆಟೋಟಗಳಿಗೆ ಸೀಮಿತವಾಗದೆ ಮನೋರಂಜನೆಯೊಂದಿಗೆ ನಮ್ಮ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ನಾಕೂರು-ಶಿರಂಗಾಲ ಗ್ರಾ.ಪಂ ಅಧ್ಯಕ್ಷ ಮಂದೋಡಿ ಜಗನ್ನಾಥ್ ಹೇಳಿದರು.

ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ನಾಕೂರು ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ 24ನೇ ವರ್ಷದ ಕ್ರೀಡೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ 24 ವರ್ಷಗಳಿಂದ ಪ್ರೇಂಡ್ಸ್ ಯೂತ್ ಕ್ಲಬ್‍ನ ಕಠಿಣಪರಿಶ್ರಮದೊಂದಿಗೆ ದಾನಿಗಳಿಂದ ಹಿತಾಶೈಗಳಿಂದ ಮತ್ತು ಪ್ರಯೋಜಕರಿಂದ ಕ್ರೀಡಾಕೂಟವನ್ನು ಗ್ರಾಮದ ಹಬ್ಬದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಂದಿನ ಬೆಳ್ಳಿಮಹೋತ್ಸವ ಆಚರಣೆಯಲ್ಲಿರುವ ಈ ಸಂಘವು ಮುಂದೆ 50 ಮತ್ತು ಶತಮನೋತ್ಸವ ಪೂರೈಸುವಂತಾಗಲಿ ಎಂದು ಜಗನ್ನಾಥ್ ಹಾರೈಸಿದರು.

ಕ್ರೀಡಾಕೂಟ ಕೇವಲ ಸೋಲು ಗೆಲುವಿಗೆ ಸೀಮಿತವಾಗದೆ. ಅದರಲ್ಲಿ ಜೀವನದ ಪಾಠಗಳನ್ನು ಕಲಿಯಬಹುದಾಗಿದೆ. ನಾವು ಮತ್ತು ನಮ್ಮ ಮಕ್ಕಳು ಮೋಬೈಲ್ ದಾಸರಾಗಿದ್ದು, ದಿನದ 24 ಗಂಟೆಯು ಮಕ್ಕಳನ್ನು ಓದು ಓದು ಎಂದು ಹೇಳುತ್ತೇವೆಯೇ ಹೊರತು. ಶರೀರ ಮತ್ತು ಮನಸ್ಸನ್ನು ಆರೋಗ್ಯವಾಗಿಡುವ ಕ್ರೀಡೆಗಳಿಗೆ ತೊಡಗಿಕೊಳ್ಳಲು ಪ್ರೋತ್ಸಾಹ ನೀಡುತ್ತಿಲ್ಲ. ಇದರಿಂದಾಗಿ ಮಕ್ಕಳು ಈಜು ಬಾರದೆ ಮರಹತ್ತಲು ತಿಳಿಯದೆ ಜೀವನದ ಸೋಲುಗಳನ್ನು ಕ್ರೀಡಾ ಸ್ಫೂರ್ತಿಯಿಂದ ತೆಗೆದುಕೊಳ್ಳಲು ಆಗದೆ ಕೆಲವು ಆತುರದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ವಿಷಾಧಿಸಿದರು.
ಮಕ್ಕಳನ್ನು ಮೊಬೈಲ್‍ನಿಂದ ದೂರವಿರಿಸಿ ಆಟ ಮತ್ತು ಪಾಠಗಳಿಗೆ ಸಮನ ಪ್ರಾಶಸ್ತ್ಯವನ್ನು ನೀಡಿ ಒಳ್ಳೆಯ ಜೀವನವನ್ನು ಕಟ್ಟಿಕೊಳ್ಳಲು ಪೋಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕೆಂದು ಕರೆ ನೀಡಿದರು.

ನಾಕೂರು ಶಿರಂಗಾಲ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನರ್ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ರೀತಿಯ ಕ್ರೀಡಾಕೂಟಗಳು ನಡೆದಾಗ ದೈಹಿಕ ಮತ್ತು ಮಾನಸಿಕ ಕ್ಷಮತೆಯೊಂದಿಗೆ ಜೀವನವನ್ನು ಕ್ರೀಡಾಸ್ಫೂರ್ತಿಯಿಂದ ನೋಡಲು ಸಾಧ್ಯವಾಗುತ್ತದೆ. 24 ವರ್ಷಗಳಿಂದ ಕ್ರೀಡಾಕೂಟವನ್ನು ಆಯೋಜಿಸಿಕೊಂಡು ಬರುತ್ತಿರುವ ಫ್ರೆಂಡ್ಸ್ ಯೂತ್ ಕ್ಲಬ್‍ನವರು ಅಭಿನಂದಾರ್ಹರು ಎಂದು ಹೇಳಿದರು.
ಸಮಾರಂಭ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನಾಕೂರು ಶಿರಂಗಾಲ ಗ್ರಾ.ಪಂ ಮಾಜಿ ಅಧ್ಯಕ್ಷ, ಫ್ರೆಂಡ್ಸ್ ಯೂತ್ ಕ್ಲಬ್ ಮಾಜಿ ಅಧ್ಯಕ್ಷ ಬಿ.ಜಿ.ರಮೇಶ್, ಮಕ್ಕಳಿಗೆ ಸರಿಯಾದ ಸಮಯದಲ್ಲಿ ಸರಿಯಾದ ವೇದಿಕೆಯನ್ನು ಒದಗಿಸುವ ಮೂಲಕ ಅವರಲ್ಲಿನ ಪಠ್ಯೇತರ ಚಟುವಟಿಕೆಗಳ ಪ್ರತಿಭೆಯನ್ನು ಹೊರ ತರಲು ಸಾಧ್ಯವಾಗುತ್ತದೆ. ಈ ಕ್ರೀಡಾಕೂಟವು ಸಾಂಸ್ಕøತಿಕ ಹಬ್ಬವಾಗಿ ನಡೆಯುತ್ತಿದ್ದು, ಮುಂದಿನ ವರ್ಷ ರಜತಮಹೋತ್ಸವವನ್ನು ಆಚರಿಸಲಿದೆ. ಕ್ರೀಡೆಯು ಮನುಷ್ಯನ ಜೀವನದಲ್ಲಿ ಎಂತಹ ಬದಲಾವಣೆಗಳನ್ನು ತರಬಲ್ಲದು ಎಂದರು.
ತಮ್ಮ ಪಕ್ಕದ ಗ್ರಾಮದವರಾದ ಟೆನ್ನಿಸ್‍ಪಟ್ಟು ರೋಹನ್‍ಬೋಪಣ್ಣ ಅವರು 43ನೇ ವರ್ಷದಲ್ಲಿ ಡಬಲ್ಸ್‍ನಲ್ಲಿ ವಿಶ್ವ ನಂ.1 ಪಟ್ಟವನ್ನು ಅಲಂಕರಿಸಿದ್ದು, ನಮಗೆಲ್ಲಾ ಸ್ಪೂರ್ತಿದಾಯಕವಾಗಿದ್ದಾರೆ ಎಂದು ಹೇಳಿದರು. ಕ್ರೀಡಾಕೂಟವನ್ನು ನಡೆಸುವಾಗ ವಯೋಮಿತಿ ಅನುಗುಣವಾಗಿ ತಂಡಗಳಾಗಿ ರೂಪಿಸಿ ಮೂಲಕ ಕ್ರೀಡಾಕೂಟ ನಡೆಸುವಂತಾಗಬೇಕು ಎಂದು ಕಿವಿಮಾತು ಹೇಳಿದರು.
ಸಮಾರಂಭವನ್ನು ಉದ್ದೇಶಿಸಿ ತಾ.ಪಂ ಮಾಜಿ ಅಧ್ಯಕ್ಷೆ ಗೀತಾಬಸಪ್ಪ, ಗ್ರಾ.ಪಂ ಉಪಾಧ್ಯಕ್ಷ ಬಿ.ವಿ.ಸತೀಶ್, ಮೀನಾಗಾರರ ಸಹಕಾರ ಸಂಘದ ಅಧ್ಯಕ್ಷ ಮಹ್ಮದ್ ಮಾತನಾಡಿದರು.
ಸಮಾರಂಭದ ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರುಗಳಾದ ರಾಧಮಣಿ, ಪ್ರೇಮ, ಅರುಣಾಕುಮಾರಿ, ಮೀನಾ ಜನಾರ್ಧನ, ಕಾಫಿ ಬೆಳೆಗಾರರಾದ ಈರಪ್ಪ, ಅಡಿಕೆರ ಶಾಂತಪ್ಪ, ಅಡಿಕೆರ ಧರ್ಮಪ್ಪ, ಕಾಂಗ್ರೆಸ್ ಅಧ್ಯಕ್ಷ ಆದಂ, ಸಿಎಚ್‍ಓ ರೋಶಿತ ರೈ, ಜಯಂತಿ, ನಾಕೂರು ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ ಅಧ್ಯಕ್ಷ ಬಿ.ಎ.ವಸಂತ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸಂಘದ ಕಾರ್ಯದರ್ಶಿ ಶಂಕರನಾರಾಯಣ ಸ್ವಾಗತಿಸಿ ವಂದಿಸಿದರು. ಸಂಘದ ಸದಸ್ಯ ಅಜಿತ್, ವಿನೋದ್ ನಿರೂಪಿಸಿದರು.
ಜಿಲ್ಲಾಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿಯಲ್ಲಿ 11 ತಂಡಗಳು ಭಾಗವಹಿಸಿದ್ದವು ಸ್ಥಳೀಯ ಪರುಷರ ಕಬಡ್ಡಿ ಪಂದ್ಯಾಳಿಗೆ 6 ತಂಡಗಳು ಸ್ಥಳೀಯ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಗೆ 4 ತಂಡಗಳು ಪಾಲ್ಗೊಂಡಿದ್ದವು.
ವಾಲಿಬಾಲ್ ಫೈನಲ್ ಪಂದ್ಯಾವಳಿಯು ಬಿಲಾಲ್ ಪ್ರೆಂಡ್ಸ್ ಕುಶಾಲನಗರ ಹಾಗೂ ಅಭಿ ಪ್ರೆಂಡ್ಸ್ ಮಳ್ಳೂರು ತಂಡಗಳ ನಡುವೆ ನಡೆದಿದ್ದು, ಪಂದ್ಯಾವಳಿಯ ಉದ್ಘಾಟನೆಯನ್ನು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ನಾಕೂರು ಶಿರಂಗಾಲ ಗ್ರಾ.ಪಂ ಅಧ್ಯಕ್ಷ ಮಂದೋಡಿ ಜಗನ್ನಾಥ್, ಕಾಫಿ ಬೆಳೆಗಾರರಾದ ಈರಪ್ಪ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಹೆರೂರು, ಪ್ರೆಂಡ್ಸ್ ಯೂತ್ ಕ್ಲಬ್ ಮಾಜಿ ಅಧ್ಯಕ್ಷ ಕೆ.ಪಿ.ವಸಂತ್ ಮತ್ತಿತರರು ಚಾಲನೆ ನೀಡಿದರು.
ಮಹಿಳೆಯರ ಥ್ರೋಬಾಲ್ ಫೈನಲ್ ಪಂದ್ಯಾವಳಿಯು ಮಂಜಿಕೆರೆ ತಂಡ ಎಫ್‍ವೈಸಿ ನಾಕೂರು ತಂಡಗಳ ನಡೆದಿದ್ದು ಪಂದ್ಯಾವಳಿಯ ಉದ್ಘಾಟನೆಯನ್ನು ಕಾನ್‍ಬೈಲ್ ಗ್ರಾಮದ ಕಾಫಿ ಬೆಳೆಗಾರರಾದ ನಿಲಮ್ಮ ಪೇಮಯ್ಯ ಅವರು ಉದ್ಘಾಟಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಳಕೇರಿ-ಕೋಕೇರಿ ರಸ್ತೆ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
Next Article *ಸಿಐಟಿ ಪೊನ್ನಂಪೇಟೆ ಹಾಕಿ ತಂಡಕ್ಕೆ VTU ಚಾಂಪಿಯನ್ ಪಟ್ಟ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.