ಮಡಿಕೇರಿ ಫೆ.27 NEWS DESK : ಕಳೆದ ಒಂದು ತಿಂಗಳ ಕಾಲ ನಡೆದ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಅನುಷ್ಠಾನಕ್ಕಾಗಿ ಕೊಡಗು ಜಿಲ್ಲೆಗೆ ಪ್ರಶಸ್ತಿ ಲಭಿಸಿರುವುದು ಶ್ಲಾಘನಾರ್ಹ. ಜಾಥಾ ಯಶಸ್ಸಿಗಾಗಿ ಶ್ರಮಿಸಿದ ಅಧಿಕಾರಿಗಳು ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೂ ಕಾಳಜಿ ತೋರಲಿ ಎಂದು ಮಾನವ ಬಂದುತ್ವ ವೇದಿಕೆಯ ಜಿಲ್ಲಾ ಸಂಚಾಲಕರು ಹಾಗೂ ಸಂವಿಧಾನ ಜಾಗೃತಿ ಜಾಥಾದ ಸದಸ್ಯರೂ ಆದ ಜೆ.ಎಲ್.ಜನಾರ್ಧನ್ ಮನವಿ ಮಾಡಿದ್ದಾರೆ.
ಪ್ರಶಸ್ತಿ ಲಭಿಸಿದ ಬಗ್ಗೆ ಹರ್ಷ ಹಂಚಿಕೊAಡ ಅವರು, ಜನರಲ್ಲಿ ಸಂವಿಧಾನದ ಕುರಿತು ಅರಿವು ಮೂಡಿಸಲು ಜಾಥಾ ಆಯೋಜಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಅವರ ಕ್ರಮ ಸ್ವಾಗತಾರ್ಹ ಮತ್ತು ಕೃತಜ್ಞತೆಗೆ ಪಾತ್ರವಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು, ಎರಡು ಕ್ಷೇತ್ರಗಳ ಶಾಸಕದ್ವಯರು, ಜಿಲ್ಲಾಡಳಿತ, ಜಿ.ಪಂ, ಎಲ್ಲಾ ಸ್ಥಳೀಯ ಸಂಸ್ಥೆಗಳು, ದಲಿತ ಸಂಘಟನೆಗಳು ಸೇರಿದಂತೆ ಎಲ್ಲಾ ಸಂಘನೆಗಳು, ಅಧಿಕಾರಿಗಳು ಹಾಗೂ ಜನರ ಸಹಕಾರದಿಂದ ಜಾಥಾ ಯಶಸ್ವಿಯಾಗಿದೆ. ದೇಶದ ಸಂವಿಧಾನದ ಮೇಲಿನ ಗೌರವದಿಂದ ಇದೆಲ್ಲವೂ ಸಾಧ್ಯವಾಗಿದೆ. ಇದೇ ಮಾದರಿಯಲ್ಲಿ ಮಡಿಕೇರಿ ನಗರದಲ್ಲೊಂದು ಡಾ.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಕ್ರಮ ಕೈಗೊಂಡು ಸಂವಿಧಾನ ಶಿಲ್ಪಿಗೆ ವಿಶೇಷ ಗೌರವ ಅರ್ಪಿಸಬೇಕು ಎಂದು ಜನಾರ್ಧನ ಮನವಿ ಮಾಡಿದ್ದಾರೆ.
ಮಹಾಗ್ರಂಥ ಸಂವಿಧಾನದ ಮೂಲಕ ದೇಶದ ಐಕ್ಯತೆಗಾಗಿ ಶಕ್ತಿ ತುಂಬಿದ ಡಾ.ಅಂಬೇಡ್ಕರ್ ಅವರ ಪ್ರತಿಮೆ ರಾಜ್ಯದ ಬಹುತೇಕ ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಸ್ಥಾಪನೆಯಾಗಿದೆ. ಆದರೆ ಮಡಿಕೇರಿಯಲ್ಲಿ ಮಾತ್ರ ಇಷ್ಟು ವರ್ಷಗಳೇ ಕಳೆದರು ಪ್ರತಿಮೆ ನಿರ್ಮಾಣವಾಗಿಲ್ಲ. ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಹೆಚ್ಚು ಆಸಕ್ತಿ ತೋರಬೇಕು ಮತ್ತು ನಗರಸಭೆ ಈ ಪ್ರಕ್ರಿಯೆಗೆ ತಕ್ಷಣ ಚಾಲನೆ ನೀಡಬೇಕೆಂದು ಜೆ.ಎಲ್.ಜನಾರ್ಧನ್ ಒತ್ತಾಯಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*