ಮಡಿಕೇರಿ ಫೆ.27 NEWS DESK : ಮೂರ್ನಾಡುವಿನ ಟೀಂ ಹೈ-ಲೋನಾ ವತಿಯಿಂದ ನಡೆದ ಮೂರ್ನಾಡು ಚಾಂಪಿಯನ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಸೀಸನ್-2 ನಲ್ಲಿ ಶುಶಾಂತ್ ಫ್ರೆಂಡ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಎಫ್ರೋನ್ ತಂಡ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಮೂರ್ನಾಡುವಿನ ಶ್ರೀಲಾಲು ಮುದ್ದಯ್ಯ ಮೈದಾನದಲ್ಲಿ ಟೀಂ ಹೈ-ಲೋನಾ ಸಂಘಟನೆಯ ನಾಯಕರಾದ ಪಿ.ಎಸ್.ಇಸ್ಮಾಯಿಲ್ ಹಾಗೂ ರಂಜಿತ್ ಕುಮಾರ್ ನೇತೃತ್ವದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಗ್ರಾಮದ ಹನ್ನೆರಡು ಯುವ ಕ್ರಿಕೆಟ್ ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೂರ್ನಾಡು ಶ್ರೀಅನ್ನಪೂರ್ಣೇಶ್ವರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ.ಮಹಾಬಲೇಶ್ವರ್ ಭಟ್, ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಆದ್ದರಿಂದ ಪ್ರಸ್ತುತ ದಿನಗಳಲ್ಲಿ ಕ್ರೀಡಾಕೂಟಗಳನ್ನು ಹೆಚ್ಚು ಹೆಚ್ಚು ಆಯೋಜಿಸುವ ಅಗತ್ಯವಿದೆ ಎಂದರು.
ಯುವಕ, ಯುವತಿಯರು ದುಶ್ಚಟಗಳಿಗೆ ಬಲಿಯಾಗಿ, ಕಾಲಹರಣ ಮಾಡುವುದನ್ನು ಬಿಟ್ಟು ಬಿಡುವಿನ ಸಮಯದಲ್ಲಿ ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಕೂಡ ಮೂರ್ನಾಡುವಿನಲ್ಲಿ ನಿರಂತರವಾಗಿ ಕ್ರೀಡಾಕೂಟಗಳು ನಡೆಯುವಂತಾಗಲಿ, ಇದಕ್ಕೆ ಸದಾ ಸಹಕಾರ ನೀಡುವುದಾಗಿ ಡಾ.ಮಹಾಬಲೇಶ್ವರ್ ಭಟ್ ಭರವಸೆ ನೀಡಿದರು.
ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಕೆ.ಜೆ.ಜಾಶಿರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಕ್ರೀಡಾಕೂಟವನ್ನು ಆಯೋಜಿಸುವುದು ಸಣ್ಣ ಕೆಲಸವಲ್ಲ. ಸಂಘಟನಾ ಮನೋಭಾವನೆ ಮತ್ತು ಆರ್ಥಿಕ ಸ್ಥಿತಿಗತಿ ಸದೃಢವಾಗಿರಬೇಕು. ಜಾತಿ, ಮತ, ಧರ್ಮದ ಭೇದವಿಲ್ಲದೆ ಮೂರ್ನಾಡುವಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು.
ಮೂರ್ನಾಡು ಗ್ರಾ.ಪಂ ಸದಸ್ಯ ಈರ ಸುಬ್ಬಯ್ಯ, ಬಾಬಾ ಸೌಂಡ್ಸ್ ಮಾಲೀಕ ಅರುಣ್ ರೈ, ಮೂರ್ನಾಡು ಅಯ್ಯಪ್ಪ ದೇವಾಲಯದ ಪ್ರಜ್ವಲ್, ಪ್ರಮುಖರಾದ ಸೈಮನ್, ಮೂರ್ತಿ, ಆಟೋ ಚಾಲಕ ಸುಂದರ್, ಪಂದ್ಯಾವಳಿ ಆಯೋಜಕರಾದ ಪಿ.ಎಸ್.ಇಸ್ಮಾಯಿಲ್, ರಂಜಿತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಅತಿಥಿ ಗಣ್ಯರು ಸ್ಪರ್ಧಾ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*