ಮಡಿಕೇರಿ ಫೆ.27 NEWS DESK : ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಯುವ ಮೋರ್ಚಾದ ವಿವಿಧ ಮಂಡಲಗಳಿಗೆ ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ತಿಳಿಸಿದ್ದಾರೆ.
ಮಡಿಕೇರಿ ನಗರ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಪಾಂಡಿರ ಪೂಣಚ್ಚ, ಮಡಿಕೇರಿ ಗ್ರಾಮಾಂತರ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಚೇತನ್ ಬಂಗೇರ, ಸೋಮವಾರಪೇಟೆ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಮೋಹಿತ್ ತಿಮ್ಮಯ್ಯ ಹಾಗೂ ವಿರಾಜಪೇಟೆ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ನಿತಿನ್ ಮೊಣ್ಣಪ್ಪ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಯುವ ಮೋರ್ಚಾದ ಮುಂದಿನ ಸಂಘಟನಾತ್ಮಕ ಚಟುವಟಿಕೆಗಳನ್ನು ಚುರುಕುಗೊಳಿಸುವ ಉದ್ದೇಶದಿಂದ ಈ ನಾಲ್ವರು ಪಕ್ಷಕ್ಕಾಗಿ ನೀಡಿದ ಕೊಡುಗೆ ಮತ್ತು ಸೇವೆಯನ್ನು ಪರಿಗಣಿಸಿ ಅಧ್ಯಕ್ಷರುಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮಹೇಶ್ ತಿಮ್ಮಯ್ಯ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.









