ಮಡಿಕೇರಿ ಫೆ.27 NEWS DESK : ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವಿವಿಧ ಮಂಡಲಗಳಿಗೆ ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ತಿಳಿಸಿದ್ದಾರೆ. ಮಡಿಕೇರಿ ನಗರ ಅಧ್ಯಕ್ಷರಾಗಿ ಪಿ.ಜಿ.ಗಜೇಂದ್ರ (ಕುಶ) ಭಗವತಿ ನಗರ, ಮಡಿಕೇರಿ ಗ್ರಾಮಾಂತರ ಅಧ್ಯಕ್ಷರಾಗಿ ಬಿ.ಎಂ.ಪ್ರದೀಪ್ ನಾಪೋಕ್ಲು, ವಿರಾಜಪೇಟೆ ಅಧ್ಯಕ್ಷರಾಗಿ ಪೊಟ್ಟಂಡ ನವೀನ್ ಉತ್ತಯ್ಯ ಹಾಲುಗುಂದ ಹಾಗೂ ಸೋಮವಾರಪೇಟೆ ಅಧ್ಯಕ್ಷರಾಗಿ ಪಿ.ಆರ್.ಸುನಿಲ್ ಕುಮಾರ್ ಸುಂಟಿಕೊಪ್ಪ ಅವರನ್ನು ನೇಮಕ ಮಾಡಲಾಗಿದೆ. ಪಕ್ಷ ಸಂಘಟನೆಯ ದೃಷ್ಟಿಯಿಂದ ನಾಲ್ವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಪ್ರು ರವೀಂದ್ರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.










