ಮಡಿಕೇರಿ ಫೆ.28 NEWS DESK : ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ನ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮತ್ತು ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ದೇಶದ್ರೋಹಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಸುನೀಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ, ನಗರ ಬಿಜೆಪಿ, ವಿವಿಧ ಮಂಡಲಗಳು, ಎಸ್ ಸಿ ಮೋರ್ಚಾ, ಯುವ ಮೋರ್ಚಾ, ಮಹಿಳಾ ಮೋರ್ಚಾ, ಹಿಂದುಳಿದ ವರ್ಗಗಳ ಮೋರ್ಚಾ ಸೇರಿದಂತೆ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಹಾಗೂ ನಗರಸಭೆಯ ಬಿಜೆಪಿ ಸದಸ್ಯರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.