ಸುರತ್ಕಲ್ ಫೆ.28 NEWS DESK : ಹತ್ತನೇ ತರಗತಿ ಇಂಗ್ಲೀಷ್ ಪೂರ್ವ ಸಿದ್ಧತಾ ಪರೀಕ್ಷೆ ಬರೆದು ಮನೆಗೆ ಮರಳದೆ ನಾಪತ್ತೆಯಾಗಿದ್ದ ಸುರತ್ಕಲ್ ನ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ.
ಹಳೆಯಂಗಡಿಯ ಕೊಪ್ಪಳ ಆಣೆಕಟ್ಟೆ ರೈಲ್ವೆ ಸೇತುವೆಯ ಕೆಳಭಾಗದ ನದಿಯಲ್ಲಿ ವಿದ್ಯಾರ್ಥಿಗಳ ಶವ ಪತ್ತೆಯಾಗಿದೆ. ಸುರತ್ಕಲ್ ಅಗರಮೇಲ್ ನ ಯಶ್ವಿತ್(15), ಹಳೆಯಂಗಡಿ ತೋಕೂರು ನಿವಾಸಿ ರಾಘವೇಂದ್ರ (15), ಸುರತ್ಕಲ್ ಗುಡ್ಡೆಕೊಪ್ಲ ನಿವಾಸಿ ನಿರೂಪ (15) ಹಾಗೂ ಚಿತ್ರಾಪುರದ ಅನ್ವಿತ್ (15) ಮೃತ ದುರ್ದೈವಿಗಳು. ಇವರು ಮಂಗಳವಾರ ಶಾಲೆಯಿಂದ ಮನೆಗೆ ಮರಳದೆ ನಾಪತ್ತೆಯಾಗಿದ್ದರು. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನದಿಗೆ ಈಜಲು ತೆರಳಿದ ಸಂದರ್ಭ ದುರ್ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.










